More

    ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅಸ್ಮಿತಾಯ್, ಅಮೆರಿಕದ ಡಿಸಿ ಸೌತ್ ಏಷ್ಯನ್ ಫಿಲ್ಮ್ ಫೆಸ್ಟಿವಲ್‌ಗೆ ಕೊಂಕಣಿ ಸಿನೆಮಾ

    ಮಂಗಳೂರು: ಮಾಂಡ್ ಸೊಭಾಣ್ ನಿರ್ಮಾಣದ ‘ಅಸ್ಮಿತಾಯ್’ ಕೊಂಕಣಿ ಚಲನಚಿತ್ರ ಅಮೆರಿಕ ವಾಷಿಂಗ್ಟನ್ ಡಿಸಿಯಲ್ಲಿ ನಡೆಯುವ ಡಿಸಿ ಸೌತ್ ಏಷ್ಯನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಡಿಸೆಂಬರ್ 2ರಂದು ಬೆಳಗ್ಗೆ 11ಕ್ಕೆ ಪ್ರದರ್ಶನಗೊಳ್ಳಲಿದೆ.

    ಸೆಪ್ಟೆಂಬರ್ 15ರಂದು ತೆರೆ ಕಂಡ ಅಸ್ಮಿತಾಯ್ ಚಿತ್ರ 13 ದೇಶಗಳಲ್ಲಿ 400ಕ್ಕೂ ಅಧಿಕ ದೇಖಾವೆಗಳು ಪ್ರದರ್ಶನಗೊಂಡಿದ್ದು, ಕೊಂಕಣಿ ಚಲನಚಿತ್ರ ಕ್ಷೇತ್ರದಲ್ಲಿ ಇದೊಂದು ದಾಖಲೆ. ‘ಚಲನಚಿತ್ರದಿಂದ ಚಳವಳಿ’ ಧ್ಯೇಯದೊಡನೆ ಮಾಂಡ್ ಸೊಭಾಣ್ ಈ ಚಿತ್ರ ನಿರ್ಮಿಸಿದ್ದು ಇದುವರೆಗೆ ಭಾರತ, ಯುಎಇ, ಕುವೈತ್, ಬಹರೇನ್, ಸೌದಿ, ಒಮಾನ್, ಕತಾರ್, ಇಂಗ್ಲೆಂಡ್, ಐರ್ಲೆಂಡ್, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಅಮೆರಿಕ ಮತ್ತು ಕೆನಡಾದಲ್ಲಿ ಪ್ರದರ್ಶನಗೊಂಡಿದೆ. ಇನ್ನೂ ಹಲವು ದೇಶಗಳಲ್ಲಿ, ಮುಂಬೈ, ಬೆಂಗಳೂರು ಮತ್ತಿತರ ಮಹಾನಗರಗಳಲ್ಲೂ ವೀಕ್ಷಣೆಗೆ ಅನುವು ಮಾಡಿಕೊಡಲಾಗುತ್ತಿದೆ. ಮಂಗಳೂರಿನ ಭಾರತ್ ಸಿನೆಮಾದಲ್ಲಿ ಇದು ಹತ್ತನೇ ವಾರದಲ್ಲಿದ್ದು ದಿನಂಪ್ರತಿ ಸಂಜೆ 5ಕ್ಕೆ ಒಂದು ದೇಖಾವೆ ನಡೆಯುತ್ತಿದೆ.

    ಕೊಂಕಣಿ ಜನರ ಅಸ್ಮಿತೆಯ ಹುಡುಕಾಟದ ಎಳೆಯೊಂದಿಗೆ ಸಾಗುವ ಕತೆ ಗೋವಾದಿಂದ ವಲಸೆ, ಕೊಂಕಣಿಯ ಶ್ರೀಮಂತ ಜನಪದ ಪರಂಪರೆಯ ದೃಶ್ಯ ವೈಭವವನ್ನು ನವಿರಾದ ಪ್ರೇಮಕತೆಯೊಂದಿಗೆ ತೋರಿಸುತ್ತದೆ. ಎರಿಕ್ ಒಝೇರಿಯೊ ಬರೆದ ಮೂಲಕತೆಗೆ ಜೋಯಲ್ ಪಿರೇರ ಚಿತ್ರಕತೆ ಮತ್ತು ಸಂಭಾಷಣೆ ರಚಿಸಿದ್ದು, ಯುವ ನಿರ್ದೇಶಕ ವಿಲಾಸ್ ರತ್ನಾಕರ್ ಕ್ಷತ್ರಿಯ ನಿರ್ದೇಶನ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts