More

    ಕೃಷಿ ಕಾಯ್ದೆ ವಾಪಸ್ ಪೆಡಯಲೇಬೇಕು

    ಕೊಪ್ಪಳ: ಕೃಷಿ ಕಾಯ್ದೆಗಳನ್ನು ಖಂಡಿಸಿ ದೇಶಾದ್ಯಂತ ಕರೆ ನೀಡಿದ್ದ ಹೆದ್ದಾರಿ ತಡೆಗೆ ಜಿಲ್ಲೆಯ ರೈತರು ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಬೆಂಬಲ ಸೂಚಿಸಿದ್ದು, ಶನಿವಾರ ತಾಲೂಕಿನ ಹಿಟ್ನಾಳ್ ಟೋಲ್‌ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಮಲಗಿ ಪ್ರತಿಭಟನೆ ನಡೆಸಿದರು.

    ದೇಶ ಕಾಯುವ ಸೈನಿಕ, ನಮ್ಮನ್ನಾಳುವ ಸರ್ಕಾರದ ಪ್ರತಿನಿಧಿಗಳು ಸೇರಿ ಪ್ರತಿಯೊಬ್ಬರಿಗೂ ಅನ್ನ ನೀಡುವುದು ರೈತರು. ಕೇಂದ್ರ ಸರ್ಕಾರ ರೈತರಿಗೆ ಮಾರಕವಾಗುವ ಮೂರು ಕೃಷಿ ಕಾಯ್ದೆಗಳನ್ನು ಜಾರಿ ಮಾಡಿದೆ. ಇವುಗಳಿಂದ ರೈತರ ಬದುಕು ಮುರಾಬಟ್ಟೆಯಾಗಲಿದೆ. ಸಣ್ಣ ಮತ್ತು ಅತಿ ಸಣ್ಣ ರೈತರು ಭೂಮಿ ಕಳೆದುಕೊಂಡು ಬೀದಿಗೆ ಬರಲಿದ್ದಾರೆ. ಬಂಡವಾಳ ಶಾಹಿಗಳಿಗೆ ಅನುಕೂಕವಾಗುವ ಕಾನೂನು ರೂಪಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ದೇಶದ ರೈತರಿಗೆ ಮೋಸ ಮಾಡುತ್ತಿದ್ದಾರೆ. ಅನ್ನದಾತರನ್ನ ಬೀದಿಗೆ ತರಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮ ಸರಿಯಲ್ಲವೆಂದು ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೃಷಿ ಕಾಯ್ದೆ ವಾಪಸ್ ಪಡೆಯುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲವೆಂದು ಎಚ್ಚರಿಕೆ ನೀಡಿದರು.

    ಪ್ರಗತಿಪರ ಸಂಘಟನೆಗಳ ಮುಖಂಡರು, ಕನ್ನಡಪರ ಸಂಘಟನೆಗಳು, ಆಮ್ ಆದ್ಮಿ ಪಾರ್ಟಿ, ಎಐಡಿವೈಒ, ದಲಿತ ಸಂಘರ್ಷ ಸಮಿತಿ ಸೇರಿ ಇತರ ಸಂಘಟನೆಗಳ ಮುಖಂಡರು ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ಟೋಲ್ ಬಳಿ ಸೇರಿದ ಪ್ರತಿಭಟನಕಾರರು ಮೊದಲು ರಸ್ತೆಯಲ್ಲಿ ಕುಳಿತು ಸಂಚಾರ ತಡೆ ಮಾಡಿದರು. ಬಳಿಕ ಕೆಲವರು ಮಲಗಿಕೊಂಡು ಸರ್ಕಾರದ ವಿರುದ್ಧ ಘೋಷಣೆ ಹಾಕಿದರು. ಪ್ರತಿಭಟನೆ ಸುಳಿತು ಅರಿತಿದ್ದ ಪೊಲೀಸರು ವಾಹನಗಳ ಸಂಚಾರ ಮಾರ್ಗ ಬದಲಿಸಿದ್ದರು. ಪ್ರತಿಭಟನೆ ಮಾಹಿತಿ ಇಲ್ಲದ ವಾಹನಗಳು ಬಂದಿದ್ದರಿಂದ 1 ಕಿ.ಮೀ.ಉದ್ದಕ್ಕು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಯಿತು. ಬಳಿಕ ಪೊಲೀಸರು ಪ್ರತಿಭಟನಕಾರರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.

    ವಿವಿಧ ಸಂಘಟನೆಗಳ ಮುಖಂಡರಾದ ಅಲ್ಲಮಪ್ರಭು ಬೆಟ್ಟದೂರು, ಡಿ.ಎಚ್.ಪೂಜಾರ, ಚನ್ನಬಸವನಗೌಡ ಜೇಕಿನ್, ಶರಣು ಗಡ್ಡಿ, ರಮೇಶ ವಂಕಲಕುಂಟಿ ಸೇರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts