More

    ಬಿಜೆಪಿ ನೂತನ ಜಿಲ್ಲಾಧ್ಯಕ್ಷ ದೊಡ್ಡಗೌಡ ಪದಗ್ರಹಣ ನಾಳೆ

    ಕೊಪ್ಪಳ: ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ಕುಷ್ಟಗಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಶನಿವಾರ ಪದಗ್ರಹಣ ಮಾಡಲಿದ್ದಾರೆ.

    ಹಲವು ಪೈಪೋಟಿ ನಡುವೆ ಅಧ್ಯಕ್ಷ ಹುದ್ದೆ ಪಡೆದಿರುವ ದೊಡ್ಡನಗೌಡ, ಕೊಪ್ಪಳ ನಗರದ ಶಿವಶಾಂತವೀರ ಮಂಗಲ ಭವನದಲ್ಲಿ ಮಧ್ಯಾಹ್ನ 3.30ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.

    ಇದಕ್ಕು ಮೊದಲು ನಗರದ ಗೌರಿಶಂಕರ ದೇವಸ್ಥಾನದಿಂದ ರಾಜ್ಯಾಧ್ಯಕ್ಷ ಕಟೀಲರನ್ನು ಸ್ವಾಗತಿಸಿ ಮೆರವಣಿಗೆ ಮಾಡಲಾಗುವುದು. ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷಣ ಸವದಿ, ಸಂಸದ ಸಂಗಣ್ಣ ಕರಡಿ, ಶಾಸಕರಾದ ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ್, ಬಸವರಾಜ ದಢೇಸೂಗುರು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಸೇರಿ ಪಕ್ಷದ ಇತರ ಕಾರ್ಯಕರ್ತರು ಭಾಗವಹಿಸಲಿದ್ದಾರೆಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರಗೌಡ ಪಾಟೀಲ ಹಲಗೇರಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts