More

    ಸಿಎಂ-ಡಿಸಿಎಂ ಭೇಟಿ ಬಳಿಕ ಮುಂದಿನ ನಿರ್ಧಾರ; ಕಾಂಗ್ರೆಸ್​ ಸೇರ್ಪಡೆ ಸುಳಿವು ನೀಡಿದ ಬಿಜೆಪಿ ಸಂಸದ ಸಂಗಣ್ಣ ಕರಡಿ

    ಕೊಪ್ಪಳ: ರಾಜ್ಯದಲ್ಲಿ ತಾಪಮಾನದ ಜೊತೆಗೆ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳ ನಾಯಕರು ಮತಬೇಟೆಯಲ್ಲಿ ನಿರತರಾಗಿದ್ದಾರೆ. ಇತ್ತ ಕೊಪ್ಪಳ ಟಿಕೆಟ್​ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್​ ಸೇರ್ಪಡೆಯಾಗುವುದಾಗಿ ಪರೋಕ್ಷ ಸುಳಿವು ನೀಡಿದ್ದಾರೆ.

    ಬೆಂಬಲಿಗರ ಸಭೆ ಬಳಿಕ ಸುದ್ದಿಗೋಷ್ಠಿ ಉದ್ಧೇಶಿಸಿ ಮಾತನಾಡಿದ ಸಂಸದ ಸಂಗಣ್ಣ ಕರಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲು ಬುಧವಾರ (ಏಪ್ರಿಲ್ 17) ಸಮಯ ನಿಗದಿಯಾಗಿದ್ದು ಅವರ ಭೇಟಿ ಬಳಿಕ‌ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ ಕೈಗೊಳ್ಳುವೆ ಎಂದು ಹೇಳಿದ್ದಾರೆ.

    ಇದನ್ನೂ ಓದಿ: LSG ಪರ ಪದಾರ್ಪಣೆ ಪಂದ್ಯದಲ್ಲೇ ಅನಪೇಕ್ಷಿತ ದಾಖಲೆ ಬರೆದ ವೆಸ್​ ಇಂಡೀಸ್​ನ ಮಾರಕವೇಗಿ

    ಮಂಗಳವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿಎಂ ಹಾಗೂ ಡಿಸಿಎಂ ಭೇಟಿಗೆ ನನ್ನ ಆತ್ಮೀಯ ಮಿತ್ರರೂ ಆದ ಶಾಸಕ ಲಕ್ಷ್ಮಣ ಸವದಿ ವ್ಯವಸ್ಥೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ ಕೂಡ ಮಾತನಾಡಿದ್ದು, ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಸಿಎಂ, ಡಿಸಿಎಂ ಜೊತೆ ಚರ್ಚಿಸಿ ನಾನೂ ನನ್ನ ನಿರ್ಣಯ ಹೇಳುತ್ತೇನೆ. ನನ್ನ ಬೇಡಿಕೆ ಎನೆಂಬುದನ್ನು ನಿಮ್ಮ ಮುಂದೆ ಹೇಳುವುದಿಲ್ಲ.

    ಜನಾರ್ದನ ರೆಡ್ಡಿ ಅವರನ್ನು ಹೊರತುಪಡಿಸಿ ಬಿಜೆಪಿಯ ಯಾವ ನಾಯಕರೂ ಸಂಪರ್ಕದಲ್ಲಿ ಇಲ್ಲ. ಕಾಂಗ್ರೆಸ್ ಸೇರ್ಪಡೆ ತೀರ್ಮಾನದ ಬಳಿಕ ಯಾರೆಲ್ಲ ನನ್ನನ್ನು ನಿರ್ಲಕ್ಷ್ಯ ಮಾಡಿದ್ದಾರೆ ಎನ್ನುವುದನ್ನು ಬಹಿರಂಗಪಡಿಸುವೆ ಎಂದು ಸಂಸದ ಸಂಗಣ್ಣ ಕರಡಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts