More

    ಮುಖರ್ಜಿ ತತ್ವ-ಸಿದ್ಧಾಂತ ಅನುಕರಣೀಯ; ಬಿಜೆಪಿ ರಾಜ್ಯ ಅಧ್ಯಕ್ಷ ಕಟೀಲ್ ಅಭಿಮತ

    ಕೊಪ್ಪಳ: ಭಾರತ, ಭಾರತೀಯತೆಗೆ ಕೊಡುಗೆ ನೀಡಿರುವ ಶ್ಯಾಮಾಪ್ರಸಾದ್ ಮುಖರ್ಜಿ ಅವರ ತತ್ವ ಹಾಗೂ ಸಿದ್ಧಾಂತಗಳ ಇಂದಿಗೂ ಪ್ರಸ್ತುತವಾಗಿವೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.

    ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬುಧವಾರ ಆಯೋಜಿಸಲಾಗಿದ್ದ ಶಾಮಾ ಪ್ರಸಾದ್ ಮುಖರ್ಜಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರೂ, ಮುಖರ್ಜಿ ತತ್ವ ಮತ್ತು ಸಿದ್ಧಾಂತಗಳೊಂದಿಗೆ ರಾಜಿಯಾಗಲಿಲ್ಲ. ಲಿಯಾಖತ್ ಒಪ್ಪಂದದಲ್ಲಿ ಹಿಂದೂಗಳ ಹಿತ ಬಲಿಕೊಟ್ಟ ಕಾರಣಕ್ಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ನಿಂದ ಹೊರಬಂದರು. ಬಳಿಕ ಕಾಂಗ್ರೆಸ್‌ಗೆ ಪರ್ಯಾಯ ರಾಜಕೀಯ ಶಕ್ತಿ ಹುಟ್ಟು ಹಾಕಿದರು. ರಾಷ್ಟ್ರೀಯತೆ, ಸಮಗ್ರ ಅಭಿವೃದ್ಧಿಗಾಗಿ ಜನಸಂಘದ ಉದಯವಾಯಿತು. ಅಂದಿನ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದನ್ನು ಪ್ರಬಲವಾಗಿ ವಿರೋಧಿಸಿದ್ದರು ಎಂದರು.

    ಬಿಜೆಪಿ ಜಿಲ್ಲಾ ಅಧ್ಯಕ್ಷ ದೊಡ್ಡನಗೌಡ ಪಾಟೀಲ್ ಮಾತನಾಡಿ, ಮುಖರ್ಜಿ ಅವರ ದೂರದರ್ಶಿತ್ವ, ರಾಷ್ಟ್ರೀಯತೆ ಹಾಗೂ ರಾಜಕೀಯ ಬದ್ಧತೆಯನ್ನು ನಾವು ಅನುಸರಿಸಬೇಕಿದೆ. ಮುಖರ್ಜಿ ಕಂಡಿದ್ದ ಎಲ್ಲ ಕನಸುಗಳನ್ನು ಪ್ರಧಾನಿ ನರೇಂದ್ರ ಮೋದಿ ನನಸು ಮಾಡುತ್ತಿದ್ದಾರೆ ಎಂದರು.

    ಸಂಸದ ಸಂಗಣ್ಣ ಕರಡಿ, ಶಾಸಕರಾದ ಹಾಲಪ್ಪ ಆಚಾರ್, ಪರಣ್ಣ ಮುನವಳ್ಳಿ, ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ, ರಾಜ್ಯ ಕಟ್ಟ ಸಮಿತಿ ಸಂಚಾಲಕ ಮಾ.ನಾಗರಾಜ, ವಿಭಾಗ ಸಹ ಪ್ರಭಾರ ನೇಮಿರಾಜ ನಾಯ್ಕ, ರಾಜ್ಯ ಕಾರ್ಯದರ್ಶಿ ಹೇಮಲತಾ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರು ಪಾಟೀಲ್ ಹಲಗೇರಿ, ನವೀನ್ ಗುಳಗಣ್ಣನವರ್ ಮತ್ತು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts