More

    ಬಾಲ್ಯವಿವಾಹ ಮಾಡಿದರೆ ಶಿಕ್ಷೆಗೆ ಗುರಿ: ಕೊಪ್ಪಳ ತಹಸೀಲ್ದಾರ್ ವಿಠ್ಠಲ್ ಚೌಗಲಾ ಹೇಳಿಕೆ

    ಕೊಪ್ಪಳ: ಬಾಲ್ಯವಿವಾಹ ಅನಿಷ್ಠ ಪದ್ಧತಿ. ಇದೊಂದು ಶಿಕ್ಷಾರ್ಹ ಅಪರಾಧ ಎಂದು ತಹಸೀಲ್ದಾರ್ ವಿಠ್ಠಲ್ ಚೌಗಲಾ ಹೇಳಿದರು.

    ನಗರದ ತಹಸಿಲ್ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಬಾಲ್ಯವಿವಾಹ ತಡೆ ಮತ್ತು ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. 2018ರ ನಂತರದ ಎಲ್ಲ ಬಾಲ್ಯವಿವಾಹಗಳು ಅಸಿಂಧು. ಒಂದು ವೇಳೆ ಕದ್ದು ಮುಚ್ಚಿ ಅಪ್ರಾಪ್ತ ಬಾಲಕಿ ಮದುವೆ ಮಾಡಿದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಚಿಕ್ಕ ವಯಸ್ಸಿನಲ್ಲಿ ಮದುವೆಯಾಗುವುದರಿಂದ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಮದುವೆ ಕಾರ್ಡ್ ಮುದ್ರಿಸುವ ಮುದ್ರಣಕಾರರು ವಧು-ವರರ ವಯಸ್ಸಿನ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಆಮಂತ್ರಣ ಪತ್ರಿಕೆ ಮುದ್ರಿಸಿದಲ್ಲಿ, ಬಾಲ್ಯವಿವಾಹವಾಗಿದ್ದರೆ ಮುದ್ರಣಕಾರರ ವಿರುದ್ಧವೂ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ಗ್ರಾಪಂ ಮಟ್ಟದಲ್ಲಿ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ ರಚಿಸಲಾಗಿದೆ. ತಾಲೂಕಿನ ಎಲ್ಲ ಗ್ರಾಪಂಗಳಲ್ಲಿ ಕನಿಷ್ಠ 3 ತಿಂಗಳಿಗೊಮ್ಮೆ ಸಭೆ ನಡೆಸಬೇಕು. ಮಕ್ಕಳಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದಲ್ಲಿ ಪರಿಹರಿಸಬೇಕು. ಗ್ರಾಪಂ ಮಟ್ಟದಲ್ಲಿ ಸಮಸ್ಯೆ ಪರಿಹಾರವಾಗದಿದ್ದಲ್ಲಿ ತಾಲೂಕು ಮಟ್ಟದ ಸಮಿತಿಗೆ ವರದಿ ಮಾಡಬೇಕು. ಅಧಿಕಾರಿಗಳು ಈ ವಿಷಯದಲ್ಲಿ ನಿರ್ಲಕ್ಷಿಸಿದರೆ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದೆಂದು ಎಚ್ಚರಿಸಿದರು.

    ತಾಪಂ ಇಒ ದಂಡೆಪ್ಪ ದುರಡಿ, ನಗರಸಭೆ ಪೌರಾಯುಕ್ತ ಎಚ್.ಎನ್.ಭಜಕ್ಕನವರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೋಹಿಣಿ ಕೊಟಗಾರ, ಕಾರ್ಮಿಕ ನಿರೀಕ್ಷಕ ಶಿವಶಂಕರ ತಳವಾರ ಹಾಗೂ ವಿವಿಧ ಇಲಾಖೆಗಳ ತಾಲೂಕುಮಟ್ಟದ ಅಧಿಕಾರಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts