ಕೊಪ್ಪಳ: ಪ್ರತಿಯೊಂದು ಮಗುವಿನಲ್ಲಿ ಪ್ರತಿಭೆ ಅಡಗಿದ್ದು, ಬಾಲ ಭವನವು ಅದನ್ನು ಹೊರ ತರುವ ವೇದಿಕೆಯಾಗಿದೆ ಎಂದು ಮುಖ್ಯಮಂತ್ರಿ ವಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ ಹೇಳಿದರು.
ನಗರದ ಸಾಹಿತ್ಯ ಭವನದಲ್ಲಿ ರಾಜ್ಯ ಬಾಲಭವನ ಸೊಸೈಟಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಮಕ್ಕಳ ವಿವಿಧ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಕ್ರಿಯಾಶೀಲತೆ, ಸೃಜನಶೀಲತೆ ಇರುವುದು ಮಣ್ಣಿನಲ್ಲೇ ಹೊರತು ಮೊಬೈಲ್‌ನಲ್ಲಿ ಅಲ್ಲ. ಮಗುವಿಗೆ ಊಟ ವಾಡಿಸುವಾಗಲೂ ತಾಯಂದಿರು ಮೊಬೈಲ್ ತೋರಿಸುವುದರಿಂದ ಬೆಳೆಯುತ್ತಾ ಅವರು ಮೊಬೈಲ್‌ಗೆ ಅಂಟಿಕೊಳ್ಳುತ್ತಾರೆ. ಇದು ಆರೋಗ್ಯಕರ ಬೆಳವಣಿಗೆಯಲ್ಲ. ಮಕ್ಕಳು ಸ್ವತಂತ್ರವಾಗಿ ಆಲೋಚಿಸುವುದನ್ನು ಕಲಿತಾಗ ಅವರಲ್ಲಿ ಸೃಜನಶೀಲತೆ ಅರಳುತ್ತದೆ.
ಇದನ್ನೂ ಓದಿ : ಗ್ರಾಮೀಣ ಪ್ರತಿಭೆಗೆ ಹೆಚ್ಚು ಅವಕಾಶ ಸಿಗಲಿ
ಸ್ವಂತಕ್ಕೆ ಆಟದ ಸಾವಾನುಗಳನ್ನು ಸೃಷ್ಟಿಸಿಕೊಳ್ಳುವುದು ಮಕ್ಕಳ ಮೊದಲ ಸೃಜನಶೀಲ ಕ್ರಿಯೆ. ಮನೆಯಿಂದ ಹೊರಗೆ ಮಕ್ಕಳು ಆಟಕ್ಕೆ ಇಳಿದಾಗ ಕೈಗೆ ಸಿಕ್ಕ ಸಾವಾಗ್ರಿಗಳೇ ಆಟದ ವಸ್ತುಗಳಾಗುತ್ತವೆ. ಕೇವಲ ನಾಲ್ಕು ಗೋಡೆ ಮಧ್ಯೆ ಕುಳ್ಳಿರಿಸಿ ಪ್ಲಾಸ್ಟಿಕ್ ಆಟದ ವಸ್ತುಗಳು, ಮೊಬೈಲ್‌ಗಳ ಗೀಳು ಹಚ್ಚಿಕೊಳ್ಳುವುದರಿಂದ ಮಕ್ಕಳ ದೈಹಿಕ ಮತ್ತು ವಾನಸಿಕ ಬೆಳವಣಿಗೆ ಕುಂಟಿತಗೊಳ್ಳುತ್ತದೆ ಎಂದು ಸಲಹೆ ನೀಡಿದರು.
ಶಾಸಕ ರಾಘವೇಂದ್ರ ಹಿಟ್ನಾಳ ವಾತನಾಡಿ, ಮಕ್ಕಳನ್ನೆ ಆಸ್ತಿಯನ್ನಾಗಿ ವಾಡುವ ಮನೋಭಾವನ್ನು ಇಟ್ಟುಕೊಂಡಾಗ ವಾತ್ರ ಅವರ ಭವಿಷ್ಯ ರೂಪಿಸಲು ಸಾಧ್ಯ. ಪಾಲಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಮಹತ್ವ ನೀಡಬೇಕು. ಕೇವಲ ಶಿಕ್ಷಕರ ಪಾತ್ರ ಅಷ್ಟೇ ಅಲ್ಲ ಪಾಲಕರ ಜವಾಬ್ದಾರಿಯೂ ಇದೆ ಎಂದರು.
ರಾಜ್ಯ ಬಾಲ ಭವನ ಸೊಸೈಟಿ ಅಧ್ಯಕ್ಷ ಬಿ.ಆರ್. ನಾಯ್ಡು ವಾತನಾಡಿ, ಮಕ್ಕಳಿಗೆ ಓದುವಂತ ಒತ್ತಡ ನೀಡದೇ, ಸೃಜನಾತ್ಮಕ ಕಲೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು. ಆಗ ಓದುವುದರಲ್ಲಿ ಆಸಕ್ತಿ ತಾನಾಗಿಯೇ ಬರುತ್ತದೆ. ಮಕ್ಕಳನ್ನು ವಿವಿಧ ಸ್ಪರ್ಧೆ, ಕಲೆ, ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದರು.
ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಮಾತನಾಡಿದರು. ಪ್ರಮುಖರಾದ ಗಿರೀಶ್ ಕೋಟೆ, ನಟರಾಜ್, ಲಕ್ಷ್ಮೀ ನಾರಾಯಣ, ಗೂಳಪ್ಪ ಹಲಗೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ, ನಿರೂಪಣಾಧಿಕಾರಿ ಗಂಗಪ್ಪ ಇತರರಿದ್ದರು.
ಹಿರಿಯರಿಗೆ ಗೌರವ ನೀಡಲಿ
ಶಿಕ್ಷಣದೊಂದಿಗೆ ಮಕ್ಕಳಲ್ಲಿನ ಪ್ರತಿಭೆಗೆ ಶಕ್ತಿ ತುಂಬುವ ಕೆಲಸವಾಗಲಿ. ನಮ್ಮ ಕಾಲದಲ್ಲಿ ಜಾನಪದ ಸೊಗಡು, ಗ್ರಾಮೀಣ ಕ್ರೀಡೆ, ಜಾನಪದ ಕಲೆಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿಯೇ ಮೂಡುತ್ತಿದ್ದವು. ನಮ್ಮ ಸಂಸ್ಕೃತಿ, ಕಲೆ, ಹಿರಿಯರ ಬಗ್ಗೆ ಮಕ್ಕಳಿಗೆ ತಿಳಿವಳಿಕೆ ನೀಡುವುದು ಮತ್ತು ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಅವಕಾಶ ನೀಡಿ ಅವರ ಪ್ರತಿಭೆ ಗುರುತಿಸುವ ಕೆಲವಾಗಬೇಕು. ತಾಲೂಕು ಮಟ್ಟದಲ್ಲಿ ಇಂಥ ಕಾರ್ಯಕ್ರಮಗಳು ಹೆಚ್ಚಬೇಕು. ಕೊಪ್ಪಳ ಜಿಲ್ಲಾ ಬಾಲ ಭವನ ಕಟ್ಟಡ ನಿರ್ವಾಣಕ್ಕೆ 79 ಲಕ್ಷ ರೂ. ಅನುದಾನ ಬಂದಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದರು.