More

    ಸೋನಿಯಾಗಾಂಧಿ ವಿಚಾರಣೆಗೆ ಆಕ್ರೋಶ: ಕೊಪ್ಪಳದಲ್ಲಿ ಕಾಂಗ್ರೆಸ್ ನಾಯಕರ ಪ್ರತಿಭಟನೆ

    ಕೊಪ್ಪಳ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಡಿ ವಿಚಾರಣೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಪದಾಧಿಕಾರಿಗಳು ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

    ದೇಶದ ಜನತೆಗೆ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಬಣ್ಣ ಈಗ ಬಯಲಾಗಿದೆ. ಪ್ರತಿಪಕ್ಷವನ್ನು ಕಟ್ಟಿಹಾಕಲು ಅವರ ಬಳಿ ವಿಷಯಗಳಿಲ್ಲ. ಹೀಗಾಗಿ ಈಗಾಗಲೇ ತನಿಖೆ ಪೂರ್ಣಗೊಂಡ ಪ್ರಕರಣಕ್ಕೆ ಮರು ಜೀವ ನೀಡಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಉದೋಗಿಗಳಿಗೆ ಬಾಕಿ ಮೊತ್ತವನ್ನು ಕೊಟ್ಟಿದ್ದನ್ನೇ ಅಪರಾಧವೆಂಬಂತೆ ಬಿಂಬಿಸಲಾಗುತ್ತಿದೆ. ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸಿ ಏನೂ ಸಿಗದೆ ಸುಮ್ಮನಾಗಿದೆ. ಇದೀಗ ಇಡಿ ಮೂಲಕ ಮತ್ತೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿಚಾರಣೆ ನಡೆಸುತ್ತಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳನ್ನು ಪ್ರಧಾನಿ ನರೇಂದ್ರ ಮೋದಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ದೇಶದಲ್ಲಿ ಇನ್ನು ಮುಂದೆ ಇವರ ಆಟ ನಡೆಯುವುದಿಲ್ಲ. ಮೋದಿ ಅಧಿಕಾರಕ್ಕೆ ಬಂದು 8 ವರ್ಷದಲ್ಲಿ ಒಂದೂ ಅಭಿವೃದ್ಧಿ ಕಾರ್ಯ ಮಾಡಿಲ್ಲ. ರಾಜ್ಯದಲ್ಲೂ ಬಿಜೆಪಿ ಧರ್ಮ, ಜಾತಿ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಕೈ ಬಿಡಬೇಕು. ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ. ರಾಜ್ಯ, ದೇಶದ ಜನತೆ ಬಿಜೆಪಿ ದುರಾಡಳಿತಕ್ಕೆ ಬೇಸತ್ತಿದ್ದು, ವಿಧಾನಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆಂದು ಭವಿಷ್ಯ ನುಡಿದರು. ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಪಿ.ಟಿ.ಪರಮೇಶ್ವರ ನಾಯಕ್, ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ, ಶಾಸಕ ರಾಘವೇಂದ್ರ ಹಿಟ್ನಾಳ್, ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಮುಖಂಡರಾದ ಎಚ್.ಆರ್.ಶ್ರೀನಾಥ, ಬಸವರಾಜ ಸ್ವಾಮಿ ಮಳೇಮಠ, ಕರಿಯಣ್ಣ ಸಂಗಟಿ, ಬಸವರಾಜ ಹಿಟ್ನಾಳ್, ಎಸ್.ಬಿ.ನಾಗರಳ್ಳಿ, ಕಿಶೋರಿ ಬುದನೂರ, ಮಾಲತಿ ನಾಯಕ, ಜ್ಯೋತಿ ಗೊಂಡಬಾಳ, ಸುಮಂಗಲಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts