More

    ಜಾತ್ರೆ, ಸಮಾರಂಭ ರದ್ದುಗೊಳಿಸಿ ಎಂದು ಕೊಪ್ಪಳ ಡಿಸಿಗೆ ಸಚಿವ ಬಿ.ಸಿ.ಪಾಟೀಲ್ ಸೂಚನೆ

    ಕೊಪ್ಪಳ: ಜಿಲ್ಲೆಯಲ್ಲಿ ಕರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ ಜಾತ್ರೆ ಸೇರಿ ಹೆಚ್ಚು ಜನ ಸೇರುವ ಸಭೆ, ಸಮಾರಂಭಗಳನ್ನು ರದ್ದುಗೊಳಿಸಿ ಆದೇಶಿಸಿ ಎಂದು ಜಿಲ್ಲಾಧಿಕಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ಸೋಂಕು ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅನಿವಾರ್ಯ. ಹೀಗಾಗಿ ಸಭೆ, ಸಮಾರಂಭ, ಜಾತ್ರೆಗಳನ್ನು ರದ್ದುಗೊಳಿಸಲು ಆಯಾ ತಹಸೀಲ್ದಾರರು ಕ್ರಮ ವಹಿಸಿ. ಅಳವಂಡಿ-ಬೆಟಗೇರಿ ಏತ ನೀರಾವರಿಗೆ ಅಗತ್ಯ ವಿದ್ಯುತ್ ಸಂಪರ್ಕ ಒದಗಿಸಿ. ಆದಷ್ಟು ಬೇಗ ನೀರು ಪೂರೈಸಿ. ಗುತ್ತಿಗೆದಾರರು ಕಾಮಗಾರಿ ವಿಳಂಬ ಮಾಡಿದಲ್ಲಿ ಕಪ್ಪುಪಟ್ಟಿಗೆ ಸೇರಿಸಲು ಪ್ರಸ್ತಾವನೆ ಸಲ್ಲಿಸಿ. ಮುಂಡರಗಿ ಮತ್ತು ಇತರ 84 ಗ್ರಾಮಗಳ ಕುಡಿವ ನೀರು ಕಾಮಗಾರಿ ಬಗ್ಗೆ ಗ್ರಾಮೀಣಾಭಿವೃದ್ದಿ ಸಚಿವರಿಗೆ ಪತ್ರ ಬರೆದು, ಇಲಾಖೆ ವಿಚಾರಣೆಗೆ ಕ್ರಮವಹಿಸಿ ಎಂದು ಜಿಪಂ ಸಿಇಒಗೆ ಸೂಚಿಸಿದರು.

    ಕೊಪ್ಪಳ ತಾಲೂಕಿನ ಹೊಸಳ್ಳಿ ಗ್ರಾಮಕ್ಕೆ ಭೇಟಿ ನೀಡಿದಾಗ, ಗ್ರಾಮದ ಟೀ ಅಂಗಡಿ, ಹೋಟೆಲ್‌ಗಳಲ್ಲಿ ಮದ್ಯ ಮಾರಾಟ ನಡೆಯುತ್ತಿದೆ. ಇದರಿಂದ ಗ್ರಾಮದ ಯುವಕರು ದಾರಿ ತಪ್ಪುತ್ತಿದ್ದಾರೆ ಎಂದು ಜನ ದೂರುತ್ತಿದ್ದಾರೆ. ಅಬಕಾರಿ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಅಂಗಡಿಗಳ ಪರಿಶೀಲನೆ ನಡೆಸಿ. ಅಕ್ರಮ ಮದ್ಯ ಮಾರಾಟ ಕಂಡುಬಂದಲ್ಲಿ ದೂರು ದಾಖಲಿಸಿ. ಮದ್ಯ ಸರಬರಾಜು ಮಾಡಿದವರ ವಿರುದ್ಧವೂ ಕ್ರಮ ಕೈಗೊಳ್ಳಿ ಎಂದು ತಾಕೀತು ಮಾಡಿದರು. ವಿವಿಧ ಇಲಾಖೆ ಅಧಿಕಾರಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts