More

    ಜನಪ್ರತಿನಿಧಿಗಳು, ಅಧಿಕಾರಿಗಳು ಪ್ರಾಥಮಿಕ ಸಂಪರ್ಕಿತರು ಹೆಚ್ಚಿದ ಭೀತಿ

    ಕೊಪ್ಪಳ: ಜಿಲ್ಲೆಯ ಶಾಸಕರೊಬ್ಬರು ಸೇರಿ ಒಟ್ಟು 69 ಜನರಿಗೆ ಭಾನುವಾರ ಕರೊನಾ ಇರುವುದು ದೃಢಪಟ್ಟಿದೆ. ಕಳೆದೆರೆಡು ದಿನದಿಂದ ಕಡಿಮೆ ಸಂಖ್ಯೆಯಲ್ಲಿ ದಾಖಲಾಗಿದ್ದ ಕರೊನಾ ಪ್ರಕರಣಗಳು ಭಾನುವಾರ ಮತ್ತೆ ಸ್ಪೋಟಿಸಿವೆ.

    ಈ ಮೂಲಕ ಜಿಲ್ಲೆಯಲ್ಲಿ ಬರೋಬ್ಬರಿ 515 ಪ್ರಕರಣಗಳು ದಾಖಲಾಗಿವೆ. ಇವರಲ್ಲಿ ಒಬ್ಬ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿ, ಜ್ವರ ಸೇರಿ ಇತರ ರೋಗ ಲಕ್ಷಣದಿಂದ ಬಳಲುತ್ತಿದ್ದ 53 ಹಾಗೂ 10 ಪ್ರಾಥಮಿಕ ಸಂಪರ್ಕಿತರು ಸೇರಿ ವಿವಿಧ ಟ್ರಾವೆಲ್ ಹಿಸ್ಟರಿ ಹೊಂದಿದ್ದ 5 ಜನರಿಗೆ ಸೋಂಕು ತಗುಲಿದೆ. ಸೋಂಕಿನಿಂದ ಚೇತರಿಸಿಕೊಂಡ 46 ಜನರು ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 328 ಜನ ಸೋಂಕಿನಿಂದ ಚೇತರಿಸಿಕೊಂಡಿದ್ದು, 12 ಜನ ಮೃತಪಟ್ಟಿದ್ದಾರೆ.

    ಜನಪ್ರತಿನಿಧಿ, ಅಧಿಕಾರಿಗಳಿಗೆ ಭೀತಿ: ಇನ್ನು ಭಾನುವಾರ ಗಂಗಾವತಿ ಶಾಸಕರಿಗೆ ಕರೊನಾ ಇರುವುದು ದೃಢಪಟ್ಟಿದೆ. ಜು.16ರಂದು ಜಿಲ್ಲೆಯಲ್ಲಿ ಕರೊನಾ ನಿಯಂತ್ರಣ ಕುರಿತು ಸಂಸದ ಸಂಗಣ್ಣ ಕರಡಿ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆದಿದೆ.

    ಸಭೆಯಲ್ಲಿ ಶಾಸಕರ ಎಡ ಹಾಗೂ ಬಲಭಾಗಕ್ಕೆ ಶಾಸಕರಾದ ರಾಘವೇಂದ್ರ ಹಿಟ್ನಾಳ ಹಾಗೂ ಅಮರೇಗೌಡ ಬಯ್ಯಪುರ ಕುಳಿತಿದ್ದರು. ಉಳಿದಂತೆ ಸಂಸದ ಸಂಗಣ್ಣ ಕರಡಿ, ಶಾಸಕ ಹಾಲಪ್ಪ ಆಚಾರ್, ಡಿಸಿ ಸುರಳ್ಕರ್ ವಿಕಾಸ್ ಕಿಶೋರ್, ಎಡಿಸಿ ಎಂ.ಪಿ.ಮಾರುತಿ ಸೇರಿ ಆರೋಗ್ಯ ಇಲಾಖೆ ಅಧಿಕಾರಿಗಳಿದ್ದರು. ಹೀಗಾಗಿ ಎಲ್ಲರಲ್ಲೂ ಸದ್ಯ ಆತಂಕ ಸೃಷ್ಟಿಯಾಗಿದೆ. ಆದರೆ, ಸಭೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿ ವರ್ಗ ಶಾಸಕರಿಂದ ಒಂದು ಮೀಟರ್‌ಗೂ ಅಧಿಕ ದೂರದಲ್ಲಿದ್ದರು. ಮೇಲಾಗಿ ಸಭೆಯಲ್ಲಿದ್ದ ಎಲ್ಲರೂ ಪರಸ್ಪರ ಅಂತರ ಕಾಯ್ದುಕೊಂಡಿದ್ದೆವು. ಮಾಸ್ಕ್ ಹಾಕಿಕೊಂಡು, ಸ್ಯಾನಿಟೈಸರ್ ಬಳಸಿದ್ದೆವೆ. ಯಾರೂ, ಯಾರಿಗೂ ನೇರವಾಗಿ ಸಂಪರ್ಕಕ್ಕೆ ಬಂದಿಲ್ಲ. ಸದ್ಯ ಶಾಸಕರ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಮಾಡುತ್ತಿದ್ದೇವೆ. ಎಲ್ಲರನ್ನು ವಾರ ಕಾಲ ಮನೆಯಲ್ಲಿಯೇ ಕ್ವಾರಂಟೈನ್ ಮಾಡಲಾಗುವುದು ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts