More

    ವ್ಯಾಕ್ಸಿನ್ ಪಡೆಯಲು ವಿದ್ಯಾರ್ಥಿಗಳನ್ನು ಉತ್ತೇಜಿಸಿ; ಪ್ರಾಚಾರ್ಯರಿಗೆ ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಸೂಚನೆ

    ಲಸಿಕಾ ಅಭಿಯಾನ ಪ್ರಗತಿ ಪರಿಶೀಲನಾ ಸಭೆ

    ಕೊಪ್ಪಳ: ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳಿಗೆ ಕರೊನಾ ಲಸಿಕೆ ಹಾಕಬೇಕು. ಈ ಸಂಬಂಧ ಕಾಲೇಜುಗಳಲ್ಲಿ ಸಭೆ ನಡೆಸಿ, ಲಸಿಕೆ ಹಾಕಿಸಿಕೊಳ್ಳಲು ವಿದ್ಯಾರ್ಥಿಗಳನ್ನು ಪ್ರೇರೇಪಿಸಬೇಕೆಂದು ಪ್ರಾಚಾರ್ಯರಿಗೆ ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಸೂಚಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಲಸಿಕಾ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳಿಗೆ ನಿರೀಕ್ಷಿತ ಮಟ್ಟದಲ್ಲಿ ಲಸಿಕೆ ಹಾಕುತ್ತಿಲ್ಲ. ವಿದ್ಯಾರ್ಥಿಗಳು ಕಾಲೇಜಿಗೆ ಬರುತ್ತಿಲ್ಲವೆಂಬ ನೆಪ ಹೇಳಬೇಡಿ. ವಿದ್ಯಾರ್ಥಿಗಳು ವಾಸಿಸುವ ಗ್ರಾಮ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೂ ಲಸಿಕೆ ಪಡೆಯಬಹುದು. ಈ ಬಗ್ಗೆ ಮನವರಿಕೆ ಮಾಡಬೇಕೆಂದು ತಿಳಿಸಿದರು.

    ಲಸಿಕೆ ಪಡೆದುಕೊಂಡ ಬಳಿಕವೇ ಕಾಲೇಜಿಗೆ ಬರುವಂತೆ ವಿದ್ಯಾರ್ಥಿಗಳಿಗೆ ತಾಕೀತು ಮಾಡಿ. ಆಗ ನಿರೀಕ್ಷಿತ ಗುರಿ ಸಾಧನೆ ಸಾಧ್ಯವಾಗಲಿದೆ. ಕೆಲವು ವಿದ್ಯಾರ್ಥಿಗಳು ಅಡ್ಡ ಪರಿಣಾಮ ಭೀತಿಯಿಂದ ಲಸಿಕೆ ಹಾಕಿಸಿಕೊಳ್ಳುತ್ತಿಲ್ಲ. ಭವಿಷ್ಯದಲ್ಲಿ ಕೋವಿಡ್ ಸೋಂಕಿನಿಂದ ರಕ್ಷಣೆ ಪಡೆಯಬಹುದು ಎಂದು ತಿಳಿವಳಿಕೆ ನೀಡಿ ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು. ಜಿಪಂ ಸಿಇಒ ಫೌಜಿಯಾ ತರುನಮ್, ಎಸ್ಪಿ ಟಿ.ಶ್ರೀಧರ, ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಡಿಎಚ್‌ಒ ಟಿ.ಲಿಂಗರಾಜ ಹಾಗೂ ಅಧಿಕಾರಿಗಳು, ಪ್ರಾಚಾರ್ಯರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts