More

    ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ; ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಬಣ್ಣನೆ

    ಕೊಪ್ಪಳ: ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆಶಾ ಕಾರ್ಯಕರ್ತೆಯರು ಸಲ್ಲಿಸಿದ ಸೇವೆ ಶ್ಲಾಘನೀಯ. ಕರೊನಾ ಲಸಿಕೆ ಹಾಕಿಸುವ ಪ್ರಕ್ರಿಯೆಯಲ್ಲೂ ಆಶಾ ಕಾರ್ಯಕರ್ತೆಯರು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಹೇಳಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಸಹಯೋಗದಲ್ಲಿ ಸಮರ್ಥನಂ ಅಂಗವಿಕಲರ ಸಂಸ್ಥೆಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಆಶಾ ಕಾರ್ಯಕರ್ತೆಯರಿಗೆ ಕೋವಿಡ್ ಸುರಕ್ಷತಾ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 40ರಿಂದ 50 ವರ್ಷದವರಿಗೂ ಲಸಿಕೆ ಹಾಕಲಾಗುವುದು. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಅಧಿಕಾರಿಗಳು ನಿಮ್ಮ ಕುಟುಂಬದವರು ಲಸಿಕೆ ಪಡೆಯುವಂತೆ ಪ್ರೇರೇಪಿಸಬೇಕೆಂದು ಸೂಚಿಸಿದರು.

    ಡಿಎಚ್‌ಒ ಅಲಕಾನಂದಾ ಮಳಗಿ ಮಾತನಾಡಿ, ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಪ್ರತಿಯೊಂದು ಕಾರ್ಯಕ್ರಮಗಳಿಗೂ ಸಹಕರಿಸುತ್ತಿದ್ದಾರೆ. ಕರ್ತವ್ಯದ ಅವಧಿಯಲ್ಲಿ ಸುರಕ್ಷತೆ ಸೇರಿ ಎಲ್ಲ ರೀತಿಯ ಸಹಕಾರ ನೀಡುತ್ತೇವೆ ಎಂದರು. ಸಮರ್ಥನಂ ಸಂಸ್ಥೆಯ ವ್ಯವಸ್ಥಾಪಕ ಡಿ.ಮೌನೇಶಪ್ಪ ಮಾತನಾಡಿ, ಜಿಲ್ಲೆಯಲ್ಲಿ 1343 ಆಶಾ ಕಾರ್ಯಕರ್ತೆಯರಿದ್ದು, ಎಲ್ಲರಿಗೂ ಕೋವಿಡ್ ಸುರಕ್ಷತಾ ಕಿಟ್‌ಗಳನ್ನು ವಿತರಿಸಲಾಗುವುದು. ಆಶಾ ಕಾರ್ಯಕರ್ತೆಯರು ನಮ್ಮ ಆರೋಗ್ಯ ಕಾಪಾಡುತ್ತಿದ್ದಾರೆ. ಅವರ ಆರೋಗ್ಯ ಕಾಪಾಡುವುದು ನಮ್ಮ ಕರ್ತವ್ಯ ಎಂದರು. ಸಮರ್ಥನಂ ಅಂಗವಿಕಲರ ಸಂಸ್ಥೆಯ ಕಿರಣ್ ಕುಮಾರ್, ಪವಿತ್ರರಾಜ್ ಹಾಗೂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts