ಕೊಪ್ಪಳ: ಬಾಲ್ಯವಿವಾಹ ಒಳಗೊಂಡು ಪೋಕ್ಸೋ ಪ್ರಕರಣಗಳು ಹೆಚ್ಚದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಇತ್ತೀಚೆಗೆ ಹಮ್ಮಿಕೊಂಡಿದ್ದ ಸಮನ್ವಯ ಸಮತಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದರು.
ಬಾಲ್ಯವಿವಾಹ ಪ್ರಕರಣಗಳಲ್ಲೂ ಪೋಕ್ಸೋ ಪ್ರಕರಣ ದಾಖಲಿಸಬಹುದು. ಶಾಲಾ ಮಕ್ಕಳಿಗೆ ಬಾಲ್ಯ ವಿವಾಹದಿಂದ ಸಾಮಾಜಿಕ, ಕೌಟುಂಬಿಕ ಮತ್ತು ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ. ಗ್ರಾಮ ಸಭೆಗಳಲ್ಲಿ ಪಾಲಕರಿಗೆ ಈಬಗ್ಗೆ ಮನವರಿಕೆ ಮಾಡಿ. ಪ್ರೌಢಶಾಲಾ ಮಕ್ಕಳಿಗೆ ಹೆಚ್ಚಿನ ಜಾಗೃತಿ ಮೂಡಿಸಿ. ಶಾಲೆಯಲ್ಲಿ ಯಾವುದೇ ವಿದ್ಯಾರ್ಥಿನಿ ಸತತ ಒಂದು ವಾರ ಗೈರಾದರೆ ಮುಖ್ಯ ಶಿಕ್ಷಕರು ಮಕ್ಕಳ ಕಲ್ಯಾಣ ಸಮಿತಿಗೆ ಮಾಹಿತಿ ನೀಡಬೇಕು. ಇದರಿಂದ ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧಿತಿಗೆ ಮಕ್ಕಳು ಒಳಗಾಗುವುದನ್ನು ತಡೆಯಬಹುದು. ಮಕ್ಕಳ ಸಹಾಯವಾಣಿಗೆ ಬರುವ ಕರೆಗಳನ್ನು ಗಂಭೀರವಾಗಿ ಪರಿಗಣಿಸಿ. ಬಾಲ ಗರ್ಭಿಣಿಯರ ಮಾಹಿತಿ ಸಿಕ್ಕ ತಕ್ಷಣ ವೈದ್ಯರು, ಆಶಾ ಕಾರ್ಯಕರ್ತೆಯರು ಇಲಾಖೆಗೆ ಮಾಹಿತಿ ನೀಡಿ ಪ್ರಕರಣ ದಾಖಲಿಸುವಂತೆ ತಿಳಿಸಿದರು.
ಶಾಲಾ ಪೂರ್ವ ಶಿಕ್ಷಣ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ. ಅಂಗನವಾಡಿ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ. ಒತ್ತಡ ನೀಡದೇ ಆಟದೊಂದಿಗೆ ಪಾಠ ಮಾಡಿ. ಡೆಂ ಜ್ವರ ಬಗ್ಗೆ ಎಚ್ಚರವಹಿಸಿ. ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಿ. ಶಾಲಾ&ಕಾಲೇಜಿನಿಂದ 100 ಮೀಟರ್ ಅಂತರದಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವಂತಿಲ್ಲ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಿ. ಹೊರಾಂಗಣದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ. ಮಾದಕ ವಸ್ತು ಸೇವನೆಯಿಂದಾಗುವ ದುಷ್ಪರಿಣಾಗಳ ಅರಿವು ಮೂಡಿಸುವಂತೆ ಹೇಳಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ಮಲಕಾರಿ ರಾಮಪ್ಪ ಒಡೆಯರ್ ಮಾತನಾಡಿ, ಜಿಲ್ಲಾ ನ್ಯಾಯಾಧೀಶರು ಅಂಗನವಾಡಿಗಳಿಗೆ ಭೇಟಿ ನೀಡುತ್ತಿದ್ದಾರೆ. ಹಾಜರಾತಿ ನಿರ್ವಹಿಸದಿರುವುದು ಕಂಡುಬಂದಿದೆ. ತಾಲೂಕು ಅಧಿಕಾರಿಗಳು ನಿಯಮಿತವಾಗಿ ನಿಮ್ಮ ವ್ಯಾಪ್ತಿ ಅಂಗನವಾಡಿಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಸೂಚಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಮಾತನಾಡಿ, 103 ಪೋಕ್ಸೋ ಪ್ರಕರಣಗಳಲ್ಲಿ 20 ಖುಲಾಸೆಯಾಗಿದ್ದು, 2ರಲ್ಲಿ ಶಿೆಯಾಗಿದೆ. 98 ವಿವಿಧ ಹಂತದಲ್ಲಿವೆ. ಈ ವರ್ಷದ ಮೊದಲ ತೆಮಾಸಿಕದಲ್ಲಿ ಕೊಪ್ಪಳ ತಾಲೂಕಿನಲ್ಲಿ 21, ಗಂಗಾವತಿ 5, ಕನಕಗಿರಿ 7, ಕುಷ್ಟಗಿ 15, ಯಲಬುರ್ಗಾ 8, ತಡೆಯಾಜ್ಞೆ ಮೂಲಕ 2 ಹಾಗೂ ಬೇರೆ ಜಿಲ್ಲೆ ಪ್ರಕರಣಗಳಲ್ಲಿ 2 ಪ್ರಕರನ ದಾಖಲಾಗಿದೆ ಎಂದು ಮಾಹಿತಿ ನೀಡಿದರು.
ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಹೆಚ್ಚುವರಿ ಎಸ್ಪಿ ಹೇಮಂತ್ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ಗಂಗಪ್ಪ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯೆ ನಿಲೋಫರ್ ರಾಂಪುರಿ, ಯುನಿಸೆಫ್ನ ಹರೀಶ್ ಜೋಗಿ ಇತರರಿದ್ದರು.