

ಕೊಪ್ಪಳ: ಕೇಂದ್ರ ಸಕಾರ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಜನ ಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆ ಜಾರಿಗೊಳಿಸಿದೆ. ಯೋಜನೆಯಡಿ ಜಿಲ್ಲೆಯ 40 ಗ್ರಾಮ ಆಯ್ಕೆಯಾಗಿದ್ದು, ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಮನವಿ ಮಾಡಿದ್ದಾರೆ.
ಜಿಲ್ಲೆಯ ಏಳು ತಾಲೂಕುಗಳ 40ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಬುಡಕಟ್ಟು ಸಮುದಾಯಗಳು ಹೆಚ್ಚಾಗಿ ವಾಸಿಸುವ ದೇಶದ 63 ಸಾವಿರ ಗ್ರಾಮಗಳ ಅಭಿವೃದ್ಧಿಗೆ ಕ್ರಿಯಾ ಯೋಜೆನ ಸಿದ್ಧಪಡಿಸಲಾಗಿದೆ. ಕೇಂದ್ರ ಬುಡಕಟ್ಟು ಮಂತ್ರಾಲಯ ಅನುಷ್ಠಾನ ಮಾಡುತ್ತಿದೆ. 5 ಕೋಟಿ ಜನರಿಗೆ ಯೋಜನೆಯಿಂದ ಅನುಕೂಲವಾಗಲಿದೆ. 2028-29ರ ವೇಳೆಗೆ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಿದೆ. ಮೊದಲ ಹಂತದಲ್ಲಿ 4 ಸಾವಿರ ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದವರು ಹೆಚ್ಚಾಗಿ ವಾಸಿಸುವ 40 ಗ್ರಾಮಗಳಲ್ಲಿ ಭೌತಿಕ ಗುರಿ ನಿಗದಿಪಡಿಸಲಾಗಿದೆ. 17 ವಿವಿಧ ಇಲಾಖೆಗಳು ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಿವೆ. 100 ಬುಡಕಟ್ಟು ಬಹುಉಪಯೋಗಿ ಮಾರ್ಕೆಟಿಂಗ್ ಕೇಂದ್ರಗಳು, ಆಶ್ರಮ ಶಾಲೆಗಳು, ವಿದ್ಯಾರ್ಥಿನಿಲಯ, ಸರ್ಕಾರಿ ಅಥವಾ ರಾಜ್ಯ ಬುಡಕಟ್ಟು ವಸತಿ ಶಾಲೆಗಳ ಮೂಲ ಸೌಕರ್ಯಗಳನ್ನು ಸುಧಾರಿಸುವುದು. ಅರಣ್ಯಹಕ್ಕು ಕಾಯ್ದೆ&-2006 ಮತ್ತು ಸಮುದಾಯ ಅರಣ್ಯ ಹಕ್ಕು ನಿರ್ವಹಣೆ ಮದ್ಯಸ್ಥಿಕೆಗಳಿಗೆ ಬೆಂಬಲ, ಯೋಜನಾ ನಿರ್ವಹಣಾ ನಿಧಿಗಳು, ಉತ್ಪನ್ನ ಪ್ರದರ್ಶನ ನೀಡುವ ಬುಡಕಟ್ಟು ಜಿಲ್ಲೆಗಳಿಗೆ ಪ್ರೋತ್ಸಾಹ ನೀಡಲು ಅವಕಾಶ ಕಲ್ಪಿಸಲಾಗಿದೆ. ಯೋಜನೆಗೆ ಒಳಪಟ್ಟ 40 ಗ್ರಾಮಸ್ಥರು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದ್ದಾರೆ.