More

    ಬೆಳೆ ಹಾನಿಗೆ ಪರಿಹಾರ ಕೊಡಿ; ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಒತ್ತಾಯ

    ಡಿಸಿ ಪಿ.ಸುನಿಲ್‌ಕುಮಾರ್‌ಗೆ ಮನವಿ

    ಕೊಪ್ಪಳ: ಜಿಲ್ಲೆಯಲ್ಲಿ ಮಳೆ, ಗಾಳಿಗೆ ಭತ್ತ ಸೇರಿ ಇತರ ಬೆಳೆ ಹಾಳಾಗಿದ್ದು, ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಶುಕ್ರವಾರ ಡಿಸಿ ಪಿ.ಸುನಿಲ್ ಕುಮಾರ್‌ಗೆ ಮನವಿ ಸಲ್ಲಿಸಲಾಯಿತು.

    ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಮಾತನಾಡಿ, ಏ.7ರಂದು ಜಿಲ್ಲೆಯಲ್ಲಿ ಆಲಿಕಲ್ಲು ಸಹಿತ ಮಳೆ ಸುರಿದಿದೆ. ಮಳೆಯೊಂದಿಗೆ ಗಾಳಿ ಬೀಸಿದ್ದು, ಗಂಗಾವತಿ, ಕಾರಟಗಿ ತಾಲೂಕಿನ ವಿವಿಧ ಪ್ರದೇಶದಲ್ಲಿ ಸಾಕಷ್ಟು ಭತ್ತದ ಬೆಳೆ ನಾಶವಾಗಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ನಾನು ಸಚಿವನಾಗಿದ್ದಾಗ ಇದೇ ರೀತಿ ಮಳೆಯಾಗಿ ರೈತರು ಸಂಕಷ್ಟಕ್ಕೀಡಾಗಿದ್ದರು. ಆಗ ಸಿಎಂ ಆಗಿದ್ದ ಸಿದ್ದರಾಮಯ್ಯ ವಿಶೇಷ ಪ್ಯಾಕೇಜ್‌ನಡಿ ರೈತರಿಗೆ ಪ್ರತಿ ಹೆಕ್ಟೇರ್‌ಗೆ 25 ಸಾವಿರ ರೂ. ಪರಿಹಾರ ನೀಡಿದ್ದರು. ಈ ಬಾರಿ ಅಧಿಕ ಹಾನಿಯಾಗಿದೆ. ರೈತರ ಖರ್ಚಿನ ಪ್ರಮಾಣವೂ ಅಧಿಕವಾಗಿದೆ. ಹೀಗಾಗಿ ಪ್ರತಿ ಹೆಕ್ಟೇರ್‌ಗೆ 40 ಸಾವಿರ ರೂ. ಪರಿಹಾರ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಇದರೊಂದಿಗೆ ಉಳಿದ ಭತ್ತದ ಕಟಾವಿಗೆ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

    ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಪುರ, ರಾಘವೇಂದ್ರ ಹಿಟ್ನಾಳ್, ಜಿಪಂ ಸದಸ್ಯ ರಾಜಶೇಖರ್ ಹಿಟ್ನಾಳ್, ಮುಖಂಡರಾದ ರಡ್ಡಿ ಶ್ರೀನಿವಾಸ, ರವಿ ಕುರುಗೋಡ ಇತರರು ಇದ್ದರು.

    ಅಧಿಕಾರ ದರ್ಪ ಬೇಡ : ಕೊಪ್ಪಳ ಜಿಲ್ಲೆಯ ಎಲ್ಲ ಅಧಿಕಾರಿಗಳು ಕೆಲಸ ಮಾಡುತ್ತಿದ್ದು, ಕೃಷಿ ಸಚಿವ ಬಿ.ಸಿ.ಪಾಟೀಲ್ ಸಹಕಾರ ನೀಡಬೇಕು. ಬದಲಿಗೆ ದರ್ಪ ತೋರುವುದು ಸರಿಯಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಟಾಂಗ್ ನೀಡಿದರು. ಬಿ.ಸಿ.ಪಾಟೀಲ್ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು, ಕೃಷಿ ಖಾತೆ ನಿಭಾಯಿಸುತ್ತಿದ್ದಾರೆ. ಉತ್ತಮ ಕೆಲಸ ಮಾಡಲಿದ್ದಾರೆಂಬ ಆಶಾ ಭಾವನೆಯಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

    ಜಿಲ್ಲೆಯಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿಲ್ಲ. ಸೀಲ್‌ಡೌನ್ ಮಾಡಿದಲ್ಲಿ, ಕಾರ್ಮಿಕರು, ನಿರ್ಗತಿಕರಿಗೆ ಸೌಲಭ್ಯ ಕಲ್ಪಿಸಿ ಮಾಡಲಿ. ರೋಗ ಯಾವುದೇ ಜಾತಿ, ಮತ ನೋಡಿ ಬರುವುದಿಲ್ಲ. ದೆಹಲಿಯಲ್ಲಿ ಒಂದು ಸಮುದಾಯದವರು ನಮಾಜ್ ಮಾಡಿದ್ದನ್ನೇ ಬಿಜೆಪಿಯವರು ರಾಜಕೀಯಗೊಳಿಸುತ್ತಿದ್ದಾರೆ. ಶಾಸಕ ಬಸನಗೌಡ ಯತ್ನಾಳ್ ಮಾತು ಕೇಳಿದರೆ ಆಶ್ಚರ್ಯ ಅನಿಸುತ್ತದೆ. ಸಿಎಂ ಬಿಎಸ್‌ವೈ ಸಮುದಾಯ ಟಾರ್ಗೆಟ್ ಮಾಡಬಾರದೆಂದು ಹೇಳಿದ್ದನ್ನು ನಾವು ಸ್ವಾಗತಿಸುತ್ತೇವೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts