More

    ಅಭಿವೃದ್ಧಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ: ಶಾಸಕ ರಾಘವೇಂದ್ರ ಹಿಟ್ನಾಳ್ ಆರೋಪ

    ಕೊಪ್ಪಳ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಕರೊನಾ ನೆಪವೊಡ್ಡಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುತ್ತಿಲ್ಲವೆಂದು ಶಾಸಕ ರಾಘವೇಂದ್ರ ಹಿಟ್ನಾಳ್ ದೂರಿದರು.

    ತಾಲೂಕಿನ ಗಿಣಿಗೇರಿ ಜಿಪಂ ಕ್ಷೇತ್ರ ವ್ಯಾಪ್ತಿ ಗ್ರಾಮಗಳಲ್ಲಿ ಗುರುವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ಕಳೆದ ಮೂರು ವರ್ಷಗಳಿಂದ ಸರ್ಕಾರ ಅಭಿವೃದ್ಧಿ ಕಾಮಗಾರಿಗಳು, ಯೋಜನೆಗಳಿಗೆ ಅನುದಾನ ನೀಡುತ್ತಿಲ್ಲ. ಕೋವಿಡ್‌ನಿಂದಾಗಿ ಅಭಿವೃದ್ಧಿ ಕುಠಿತವಾಗಿದೆ. ಗ್ರಾಮ ವಿಕಾಸ ಯೋಜನೆಯಡಿ ಕ್ಷೇತ್ರದ ಎಲ್ಲ ಗ್ರಾಮಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಗಿಣಿಗೇರಿ ಗ್ರಾಮದಲ್ಲಿ ಕೈಗಾರಿಕೆಗಳು ಹೆಚ್ಚಿರುವುದರಿಂದ ವೇಗವಾಗಿ ಬೆಳೆಯುತ್ತಿದೆ. ಅದಕ್ಕೆ ತಕ್ಕಂತೆ ಸೌಲಭ್ಯಗಳನ್ನೂ ಹೆಚ್ಚಿಸಲಾಗುತ್ತಿದೆ. ರಸ್ತೆ, ಕುಡಿವ ನೀರು, ಚರಂಡಿ ಹಾಗೂ ಇತರ ಕಾಮಗಾರಿಗಳಿಗೆ 4.30 ಕೋಟಿ ರೂ. ಮಂಜೂರು ಮಾಡಲಾಗಿದೆ. ಕೆರೆಯಲ್ಲಿ ಸೈನ್ಸ್ ಪಾರ್ಕ್ ಆರಂಭಕ್ಕೆ 1 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಭಾಗ್ಯನಗರ ಪಟ್ಟಣಕ್ಕೆ 64 ಕೋಟಿ ರೂ.ನಲ್ಲಿ ಕುಡಿವ ನೀರು ಸೌಲಭ್ಯ ಕಲ್ಪಿಸಲಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕ್ಷೇತ್ರ ಅಭಿವೃಧ್ಧಿಗೆ ಸಾವಿರಾರು ಕೋಟಿ ರೂ. ಅನುದಾನ ಬಂದಿತ್ತು. ಸದ್ಯ ಬಿಜೆಪಿ ಸರ್ಕಾರ ನಿರೀಕ್ಷಿತ ಅನುದಾನ ನೀಡುತ್ತಿಲ್ಲವೆಂದು ಆರೋಪಿದರು.

    ಗ್ರಾಪಂ ಅಧ್ಯಕ್ಷ ಲಕ್ಷ್ಮಣ ಡೊಳ್ಳಿನ, ಉಪಾಧ್ಯಕ್ಷೆ ಸುಮಂಗಲ, ಜಿಪಂ ಮಾಜಿ ಸದಸ್ಯರಾದ ಗೂಳಪ್ಪ ಹಲಗೇರಿ, ಪ್ರಸನ್ನ ಗಡಾದ, ತಾಪಂ ಮಾಜಿ ಅಧ್ಯಕ್ಷ ಬಾಲಚಂದ್ರನ್, ಎಪಿಎಂಸಿ ಮಾಜಿ ಅಧ್ಯಕ್ಷ ನಾಗರಾಜ ಚಳ್ಳೊಳ್ಳಿ, ಕೊಪ್ಪಳ ನಗರಸಭೆ ಸದಸ್ಯರಾದ ಅಜೀಂ ಅತ್ತಾರ, ಅಕ್ಬರಪಾಷಾ ಪಲ್ಟನ್, ಮುಖಂಡರಾದ ನವೋದಯ ವಿರುಪಣ್ಣ, ಪಂಪಣ್ಣ ಪೂಜಾರ, ಉದಯ ಕುಮಾರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts