22.5 C
Bengaluru
Sunday, January 19, 2020

ತುಂಗಭದ್ರಾ ಎಡದಂಡೆ ಮುಖ್ಯನಾಲೆಯಲ್ಲಿ ನೀರು ಸೋರಿಕೆ

Latest News

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

<< ರಾತ್ರಿಯಿಡೀ ಕಾರ್ಯಾಚರಣೆ > ಸೋಮನಾಳ ಗ್ರಾಮದ ಬಳಿ 41ನೇ ಮೈಲ್‌ನ ಚೈನ್ ನಂಬರ್ 2147ರಲ್ಲಿ ಸೀಪೇಜ್>>

ಕಾರಟಗಿ: ತುಂಗಭದ್ರಾ ಜಲಾಶಯದಿಂದ ನೀರು ಹರಿಬಿಟ್ಟು ವಾರದಲ್ಲೇ ಎಡದಂಡೆ ಮುಖ್ಯನಾಲೆಯಲ್ಲಿ ಮತ್ತೊಂದು ಬಾರಿ ಮೂರು ಕಡೆ ಸೀಪೇಜ್ ಕಾಣಿಸಿಕೊಂಡಿದ್ದು ಅಧಿಕಾರಿಗಳು ಹಾಗೂ ರೈತರು ಸೋರಿಕೆ ತಡೆಗಟ್ಟಲು ಸಮರೋಪಾದಿಯಲ್ಲಿ ಶ್ರಮಿಸುತ್ತಿದ್ದಾರೆ.

ಎಡದಂಡೆ ಮುಖ್ಯನಾಲೆಯಲ್ಲಿ 3600 ಕ್ಯೂಸೆಕ್ ನೀರು ಹರಿಬಿಟ್ಟಿದ್ದು ತಾಲೂಕಿನ ಸೋಮನಾಳ ಗ್ರಾಮದ ಬಳಿ 41ನೇ ಮೈಲ್‌ನ ಚೈನ್ ನಂಬರ್ 2147ರಲ್ಲಿ ಸೀಪೇಜ್ (ನೀರು ಸೋರಿಕೆ) ಉಂಟಾಗಿದೆ. ಸಂಜೆ ವೇಳೆ ಸ್ಥಳೀಯ ರೈತರು, ಹಾಗೂ ಮುಖ್ಯನಾಲೆಯ ಮೇಲೆ ಪರಿಶೀಲನೆಗೆ ತೆರಳುತ್ತಿದ್ದ ತುಂಗಭದ್ರಾ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಶಂಕರಲಿಂಗೇಗೌಡ ನೇತೃತ್ವದ ಅಧಿಕಾರಿಗಳ ತಂಡ ಏಕಕಾಲಕ್ಕೆ ಸೀಪೇಜ್ ಗುರುತಿಸಿದರು.

ಮುಖ್ಯನಾಲೆಯ ಆಕ್ವಡೆಕ್ಟ್ ಬಳಿ ಸೋರಿಕೆಯನ್ನು ಕಂಡ ಅಧಿಕಾರಿಗಳು ತಕ್ಷಣವೇ ನಾಲೆಯಲ್ಲಿ ನೀರಿನ ಹರಿವನ್ನು ಕಡಿತಗೊಳಿಸಿದ್ದಾರೆ. ಅಲ್ಲದೇ, ಎಸ್ಕೇಪ್‌ಗೇಟ್ ಹಾಗೂ ವಿತರಣಾ ನಾಲೆಗಳಲ್ಲಿ ಹೆಚ್ಚು ನೀರು ಹರಿಸಿ ಘಟನಾ ಸ್ಥಳದಲ್ಲಿ ನೀರು ನಿಯಂತ್ರಿಸಿದ್ದಾರೆ. ಅಲ್ಲದೇ, ಜೆಸಿಬಿ, ಹಿಟಾಚಿ, ಟಿಪ್ಪರ್, ಟ್ರ್ಯಾಕ್ಟರ್‌ಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸುತ್ತಿದ್ದ ಅಧಿಕಾರಿಗಳು, ಸೀಪೇಜ್ ನಿಯಂತ್ರಿಸಲು ಸಿಮೆಂಟ್, ಮರಳು, ಕಪ್ಪುಮಣ್ಣನ್ನು ಸಂಗ್ರಹಿಸಿಕೊಂಡರು.

ರಾತ್ರಿಯಿಡೀ ಕಾರ್ಯಾಚರಣೆ: ಸೀಪೇಜ್‌ನಿಂದ ಕ್ರಮೇಣ ನೀರು ಸೋರಿಕೆ ರಭಸಗೊಳ್ಳುತ್ತಿರುವುದನ್ನು ಅರಿತ ಅಧಿಕಾರಿಗಳ ತಂಡ ಸಮರೋಪಾದಿಯಲ್ಲಿ ಕಾರ್ಯಾಚರಣೆಗೆ ಇಳಿಯಿತು. ನಿಗಮದ ಮುಖ್ಯ ಎಂಜಿನಿಯರ್ ಶಂಕರಲಿಂಗೇಗೌಡ, ಎಇಇ ಸೂಗಪ್ಪ, ಎಇ ಶ್ರೀನಿವಾಸ್ ಹಾಗೂ ಜೆಇ ನಾಗಪ್ಪ ರಾತ್ರಿಯಿಡೀ 15ಕ್ಕೂ ಹೆಚ್ಚು ಗ್ಯಾಂಗ್‌ಮನ್‌ಗಳು, ಸ್ಥಳೀಯ ರೈತರೊಂದಿಗೆ ಕಾರ್ಯಾಚರಣೆಯಲ್ಲಿ ತೊಡಗಿಕೊಂಡರು.

ಆತಂಕ: ಜಲಾಶಯ ಭರ್ತಿಯಾಗುತ್ತಿದ್ದಂತೆ ರಾಯಚೂರು-ಕೊಪ್ಪಳ ಜಿಲ್ಲೆಗಳ ರೈತರು ಕೃಷಿ ಭೂಮಿಯತ್ತ ಸಂಭ್ರಮದಿಂದಲೇ ಸಾಗಿದ್ದರು. ಎಲ್ಲೆಡೆ ಭತ್ತ ಸೇರಿ ನಾನಾ ಬೆಳೆಯ ಕೃಷಿಗೆ ಭರದ ಸಿದ್ಧತೆ ನಡೆಸಿದ್ದರು. ಆದರೆ, ಜಲಾಶಯದಿಂದ ನೀರು ಬಿಡುಗಡೆಗೊಂಡು ವಾರದಲ್ಲೇ ಎರಡು ಬಾರಿ ಸೀಪೇಜ್ ಕಾಣಿಸಿಕೊಂಡಿದ್ದು ರೈತರಲ್ಲಿ ಆತಂಕ ಹೆಚ್ಚಿಸಿದೆ. ಪದೇ ಪದೆ ಸೀಪೇಜ್ ಕಾಣಿಸಿಕೊಳ್ಳುತ್ತಿದ್ದಂತೆ ಆತಂಕದಿಂದಲೇ ರೈತರು ನಾಲೆಯತ್ತ ಧಾವಿಸುತ್ತಿದ್ದಾರೆ.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...