More

    ವೀರ ಸನ್ಯಾಸಿ ಸ್ವಾಮಿ ವಿವೇಕಾನಂದ ನೆನಹು

    ಕೊಪ್ಪಳ: ಸ್ವಾಮಿ ವಿವೇಕಾನಂದರು ಜಗತ್ತಿಗೆ ಯುವ ಶಕ್ತಿ ಏನೆಂದು ತೋರಿದವರು. ಅವರ ಆದರ್ಶಗಳನ್ನು ಯುವಕರು ಮೈಗೂಡಿಸಿಕೊಳ್ಳಬೇಕೆಂದು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಗಣಪತಿ ಲಮಾಣಿ ಹೇಳಿದರು.

    ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಮೆರಿಕದ ಚಿಕಾಗೋದಲ್ಲಿ ನಡೆದ ವಿಶ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಂಡು ಬಂದ ನಂತರ ಇಡೀ ಜಗತ್ತು ಭಾರತದತ್ತ ತಿರುಗಿ ನೋಡುವಂತಾಯಿತು. ವಿಶ್ವವೇ ವಿವೇಕಾನಂದರನ್ನು ಕೊಂಡಾಡಿತು. ಯುವಕರಿಗೆ ಆದರ್ಶವಾಗಿರುವುದಕ್ಕೆ, ಅವರ ಜನ್ಮ ದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.

    ದೈಹಿಕ ಶಿಕ್ಷಣ ನಿರ್ದೇಶಕ ಡಾ.ಪ್ರದೀಪ ಕುಮಾರ್ ಮಾತನಾಡಿ, ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು. ಅರ್ಥಪೂರ್ಣವಾಗಿ ಬಳಕೆ ಮಾಡಿಕೊಳ್ಳಬೇಕು. ಸಾಧನೆಗೆ ಹಲವು ರಂಗಗಳಿದ್ದು, ನಿಮಗೆ ಸೂಕ್ತ ಎನಿಸಿದ್ದನ್ನು ಆಯ್ಕೆ ಮಾಡಿಕೊಂಡು ಸಾಧನೆಯತ್ತ ಮುನ್ನುಗ್ಗಬೇಕು ಎಂದರು.

    ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ನರಸಿಂಹ ಗುಂಜಹಳ್ಳಿ ಮಾತನಾಡಿದರು. ಅತಿಥಿ ಉಪನ್ಯಾಸಕ ನಿಂಗಜ್ಜ ಸೋಂಪುರ, ಸಹಾಯಕ ಪ್ರಾಧ್ಯಾಪಕರಾದ ಡಾ.ಅಶೋಕ ಕುಮಾರ, ಶ್ರೀಕಾಂತ ಸಿಂಗಾಪುರ, ನಾಗರತ್ನಾ ತಮ್ಮಿನಾಳ, ಸುಮಿತ್ರಾ, ವಿದ್ಯಾವತಿ, ಆರತಿ ಸಜ್ಜನ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts