More

    ಕುಡಿವ ನೀರು ಕಾಮಗಾರಿ ಮಾಸಾಂತ್ಯಕ್ಕೆ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಜಿಪಂ ಸಿಇಒ ಫೌಜಿಯಾ ಸೂಚನೆ

    ಕೊಪ್ಪಳ: ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಬಹುಗ್ರಾಮ ಕುಡಿವ ನೀರು ಯೋಜನೆಗಳನ್ನು ಡಿ.31ರೊಳಗೆ ಪೂರ್ಣಗೊಳಿಸುವಂತೆ ಜಿಪಂ ಸಿಇಒ ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಸೂಚಿಸಿದರು.

    ನಗರದ ಜಿಪಂ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಯಲಬುರ್ಗಾ, ಕುಷ್ಟಗಿ ಹಾಗೂ ಕುಕನೂರು ತಾಲೂಕಿನ 331 ಗ್ರಾಮಗಳ ಬಹುಗ್ರಾಮ ಕುಡಿವ ನೀರು ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ. ಪೂರ್ಣಗೊಂಡ ಕಾಮಗಾರಿಗಳ ವಿವರವನ್ನು ಆಯಾ ದಿನ ಸಲ್ಲಿಸಿ. ಪೈಪ್‌ಲೈನ್, ಮೇಲ್ತೊಟ್ಟಿ ನಿರ್ಮಿಸಿ. ನಲ್ಲಿಗಳಿಗೆ ಸಮಪರ್ಕವಾಗಿ ನೀರು ಸರಬರಾಜಾಗಬೇಕು. ಕೆಲ ಗ್ರಾಮಗಳಲ್ಲಿ ಸರಿಯಾಗಿ ನೀರು ಪೂರೈಕೆಯಾಗುತ್ತಿಲ್ಲವೆಂದು ಜನರು ದೂರುತ್ತಿದ್ದಾರೆ. ಒಂದೊಮ್ಮೆ ಯಾವೊಂದು ಗ್ರಾಮಕ್ಕೆ ಸರಿಯಾಗಿ ನೀರು ಪೂರೈಕೆಯಾಗದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಲಾಗುವುದು. ಅನುಷ್ಠಾನಾಧಿಕಾರಿಗಳು ಕಂಪನಿ ಅಥವಾ ಗುತ್ತಿಗೆದಾರರೊಂದಿಗೆ ಸಮನ್ವಯತೆ ಸಾಧಿಸಿ, ಬಾಕಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.

    ಯಾವುದೇ ಕಾಮಗಾರಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ವಿರೋಧ ಅಥವಾ ದೂರಗಳು ಬಂದರೆ, ಆಯಾ ತಾಲೂಕಿನ ಕಾರ್ಯ ನಿರ್ವಾಹಕಾಧಿಕಾರಿಗಳು ಹಾಗೂ ಸಂಬಂಧಪಟ್ಟ ಮುಖ್ಯ ಅಭಿಯಂತರು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕೆಂದು ತಾಕೀತು ಮಾಡಿದರು. ಡಿಬಿಒಟಿ, ಜೆಜೆಎಂ, ಆರ್‌ಓ ಪ್ಲಾಂಟ್ ಸೇರಿ ವಿವಿಧ ಕುಡಿಯುವ ನೀರಿನ ಯೋಜನೆಗಳ ಪ್ರಗತಿ ಪರಿಶೀಲಿಸಿದರು. ಜಿಪಂ ಉಪಕಾರ್ಯದರ್ಶಿ ಸಮೀರ ಮುಲ್ಲಾ, ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ ಇಇ ಬಸವನಗೌಡ ಪಾಟೀಲ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts