More

    ಕಾಂಗ್ರೆಸ್ ಮೂಲ ಇಟಲಿ: ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಬಿ.ಸಿ.ನಾಗೇಶ್ ಟಾಂಗ್

    ಕೊಪ್ಪಳ: ಸಂಘ ಪರಿವಾರದ ಮೂಲ ಎಲ್ಲರಿಗೂ ಗೊತ್ತಿದೆ. ಆದರೆ, ಕಾಂಗ್ರೆಸ್ ಮೂಲ ಇಟಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟಾಂಗ್ ನೀಡಿದರು.

    ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಎಪ್ಪತ್ತು ವರ್ಷ ದೇಶ ಆಳಿದವರು ಹಾಗು ಸಿದ್ದರಾಮಯ್ಯ ತಮ್ಮ ಅಧಿಕಾರವಧಿಯಲ್ಲಿ ಏನು ಮಾಡಿದ್ದಾರೆಂದು ಎಲ್ಲರಿಗೂ ಗೊತ್ತಿದೆ. ಹಿಜಾಬ್ ವಿವಾದದ ಹಿಂದೆ ಕಾಂಗ್ರೆಸ್ ಪಿತೂರಿಯಿದೆ. ನಮಗೆ ಹಿಜಾಬ್ ಹಿಂದೆ ನಡೆಯುತ್ತಿರುವ ಪಿತೂರಿ ಬಗ್ಗೆ ಗೊತ್ತಿದೆ. ದೇಶದ ಕಾನೂನು ಉಲ್ಲಂಘನೆ ಮಾಡುವುದನ್ನು ಸಹಿಸಲಾಗದು. ಮುಂದೆ ಅವರು ದೇಶದ ಕಾನೂನು ಉಲ್ಲಂಘನೆ ಮಾಡುತ್ತೇವೆ ಎನ್ನುತ್ತಾರೆ. ಅದನ್ನೆಲ್ಲ ಒಪ್ಪಲಾಗದು. ಕೆಲ ರಾಜಕೀಯ ಪಕ್ಷಗಳು ವೋಟ್‌ಬ್ಯಾಂಕ್‌ಗಾಗಿ ಅಂಥವರನ್ನು ಬೆಂಬಲಿಸುತ್ತಿವೆ ಎಂದು ಕಾಂಗ್ರೆಸ್ ವಿರುದ್ಧ ಪರೋಕ್ಷ ಆರೋಪ ಮಾಡಿದರು.

    ಪಠ್ಯಪುಸ್ತಕ ರಚನೆ ಸಂಬಂಧ ಅನಗತ್ಯ ವಿವಾದ ಎಬ್ಬಿಸಲಾಗುತ್ತಿದೆ. ರಾಷ್ಟ್ರೀಯತೆ, ಹಿಂದುತ್ವ ಸಹಿಸದವರು ವಿವಾದ ಮಾಡುತ್ತಿದ್ದಾರೆ. ಟೀಕಿಸಲು ಏನೂ ಸಿಗದಿದ್ದಾಗ ಜಾತಿ ಬಗ್ಗೆ ಮಾತನಾಡುತ್ತಾರೆ. ಬ್ರಿಟಿಷರ ಕಾಲದಿಂದ ಇದು ನಡೆದು ಬಂದಿದೆ. ದೇಶದ ಜನರಿಗೆ ಯಾವುದು ನಿಜ, ಯಾವುದು ಸುಳ್ಳು ಅನ್ನೋದು ಗೊತ್ತಿದೆ. ಮೊದಲು ಟಿಪ್ಪು, ಭಗತ್ ಸಿಂಗ್, ನಾರಾಯಣ ಗುರು, ಬಸವಣ್ಣ ವಿಷಯಗಳನ್ನು ಪಠ್ಯದಿಂದ ತೆಗೆದು ಹಾಕಿದರೆಂದು ಸುಳ್ಳು ಹೇಳಿದರು. ಈ ಮೂಲಕ ಹಿಂದುಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಬ್ರಿಟಿಷರಿಂದ ಅಧಿಕಾರ ವಹಿಸಿಕೊಂಡ ದಿನದಿಂದ ಕಾಂಗ್ರೆಸ್ ಮಾಡಿದ್ದು ಇದನ್ನೇ. ಹಿಂದಿನ ಸರ್ಕಾರ ಮಕ್ಕಳನ್ನು ಒಡೆಯೋ ಕೆಲಸ ಮಾಡಿದ್ದು ಎಲ್ಲರಿಗೂ ಗೊತ್ತಿದೆ ಎಂದರು.


    ದೇಶದ ಇತಿಹಾಸವನ್ನು ಮಕ್ಕಳಿಗೆ ತಿಳಿಸುವಲ್ಲಿ ಮೊದಲಿನಿಂದಲೂ ತಪ್ಪಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ದೇಶದ ಎಲ್ಲ ಗ್ರಾಮಗಳಿಂದ ಜನರು ಭಾಗಿಯಾಗಿದ್ದರು. ಇತಿಹಾಸದ ಮೂಲಕ ಅದನ್ನು ತಿಳಿಸುವಲ್ಲಿ ವಿಫಲವಾಗಿದ್ದೇವೆ. ಹೀಗಾಗಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ ಮೂಲಕ ಅದನ್ನು ತಿಳಿಸುತ್ತಿದ್ದೇವೆ.
    | ಬಿ.ಸಿ.ನಾಗೇಶ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts