More

    ಕ್ಷಯ ನಿರ್ಮೂಲನೆಗೆ ಆಂದೋಲನ ನಡೆಸಿ; ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಸೂಚನೆ

    ಕೊಪ್ಪಳ: ಜಿಲ್ಲೆಯಲ್ಲಿ ಕ್ಷಯ ನಿರ್ಮೂಲನೆಗೆ ಜಾಗೃತಿ ಆಂದೋಲನ ಹಮ್ಮಿಕೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಸೂಚಿಸಿದರು.
    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕ್ಷಯಕ್ಕೆ ಸಂಬಂಧಿಸಿದ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಆಗಸ್ಟ್ 2ರಿಂದ 14ರವರೆಗೆ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ನಡೆಯಲಿದೆ.

    ಕೋವಿಡ್ ಸೋಂಕಿತರು ಹಾಗೂ ಅವರ ಸಂಪರ್ಕಿತರಲ್ಲಿ ಕ್ಷಯದ ಲಕ್ಷಣಗಳು ಕಂಡುಬಂದಲ್ಲಿ ಅಂಥವರನ್ನು ಪರೀಕ್ಷೆಗೆ ಒಳಪಡಿಸಬೇಕು. ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ನೇತೃತ್ವದಲ್ಲಿ ಕ್ಷಯ ನಿರ್ಮೂಲನಾ ಸಮಿತಿ ರಚಿಸಿ ಆಯಾ ವಾರ್ಡ್‌ಗಳನ್ನು ಕ್ಷಯ ಮುಕ್ತಗೊಳಿಸಲು ಯತ್ನಿಸಬೇಕು. ರೋಗ ನಿಯಂತ್ರಣಕ್ಕೆ ಉತ್ತಮ ರೀತಿಯಲ್ಲಿ ಕೆಲಸ ಮಾಡುವ ಗ್ರಾಪಂಗೆ ಪ್ರಶಸ್ತಿ ನೀಡಲಾಗುವುದು ಎಂದರು.

    ಜಿಪಂ ಸಿಇಒ ಫೌಜಿಯಾ ತರನ್ನುಮ್, ಡಿಎಚ್‌ಒ ಟಿ.ಲಿಂಗರಾಜ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಎಂ.ಜಿ.ಮಹೇಶ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts