More

    ರೈತರ ಸಂಕಷ್ಟಗಳಿಗೆ ಸರ್ಕಾರ ಸ್ಪಂದಿಸಲಿ

    ಕೊಪ್ಪಳ: ಕೇಂದ್ರ ಸರ್ಕಾರ ಕೃಷಿ ಕ್ಷೇತ್ರವನ್ನು ದುಬಾರಿಗೊಳಿಸುತ್ತಿದೆ. ರೈತರಿಗೆ ಮುಳುವಾಗಿರುವ ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

    ಕೃಷಿ ಕ್ಷೇತ್ರವನ್ನು ವ್ಯವಸ್ಥಿತವಾಗಿ ದುಬಾರಿಗೊಳಿಸಲಾಗುತ್ತಿದೆ. ಅದಕ್ಕೆ ಪೂರ್ವ ತಯಾರಿಯಾಗಿ ಕೃಷಿ ಕಾಯ್ದೆ ತಿದ್ದುಪಡಿ ಮಾಡಲಾಗಿದೆ. ಅಲ್ಲದೇ ಕೃಷಿ ಪರಿಕರಗಳು, ಗೊಬ್ಬರ, ಬಿತ್ತನೆ ಬೀಜ ಸೇರಿದಂತೆ ಕೃಷಿಗೆ ಸಂಬಂಧಿಸಿದ ಸಾಮಗ್ರಿಗಳು ಹಾಗು ಸೇವಾ ಬೆಲೆಯಲ್ಲಿ ಹೆಚ್ಚಳವಾಗಿದೆ. ರೈತರಿಗೆ ನೀಡುವ ಸಾಲದ ಪ್ರಮಾಣ ಕಡಿತಗೊಂಡಿದೆ. ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು 200 ದಿನಗಳಿಂದ ನಿರಂತರ ಪ್ರತಿಭಟನೆ ನಡೆಸಿದರೂ ಕೇಂದ್ರ ಸರ್ಕಾರ ಕಿವಿಗೊಡುತ್ತಿಲ್ಲವೆಂದು ಆರೋಪಿಸಿದರು.

    ಮಾರಕ ಕೃಷಿ ನೀತಿ ಕೈಬಿಡಬೇಕು. ಗೊಬ್ಬರ, ಬಿತ್ತನೆ ಬೀಜ ಹಾಗೂ ಕೃಷಿಗೆ ಸಂಬಂಧಿಸಿದ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಬೇಕು. ಕಳೆ ಬಿತ್ತನೆ ಬೀಜ ಮತ್ತು ಗೊಬ್ಬರ ತಯಾರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೃಷಿ ಸಾಲದ ಮೊತ್ತ ಹೆಚ್ಚಳ ಮಾಡಬೇಕು. ಕೃಷಿ ಕ್ಷೇತ್ರವನ್ನು ಉದ್ಯಮವಾಗಿ ಬದಲಿಸುವ ಹುನ್ನಾರ ಕೈಬಿಡಬೇಕು ಎಂದು ಒತ್ತಾಯಿಸಿದರು. ಸಂಘದ ರಾಜ್ಯ ಕಾರ್ಯದರ್ಶಿ ಹನುಮಂತಪ್ಪ ಹೊಳೆಯಾಚೆ, ಜಿಲ್ಲಾ ಅಧ್ಯಕ್ಷ ನಜೀರಸಾಬ್ ಮೂಲಿಮನಿ, ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ನಾಲಬಂದ, ಶ್ರೀನಿವಾಸ ಭೋವಿ, ಬಸವರಾಜ ಶೀಲವಂತರ್, ವಿಠ್ಠಪ್ಪ ಗೋರಂಟ್ಲಿ ಮತ್ತು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts