More

    ಮಂಚೂಣಿ ಕಾರ್ಯಕರ್ತರಿಗೆ ಲಸಿಕೆ ಹಾಕಿಸಿ- ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್

    ಕೊಪ್ಪಳ: ಕೋವಿಡ್ ನಿಯಂತ್ರಣ ಕೆಲಸಕ್ಕೆ ಆರೋಗ್ಯ ಇಲಾಖೆ ಜತೆಗೆ ನಿಯೋಜನೆಗೊಂಡಿರುವ ವಿವಿಧ ಇಲಾಖೆಗಳ ಸಿಬ್ಬಂದಿಯನ್ನು ಮುಂಚೂಣಿ ಕಾರ್ಯಕರ್ತರೆಂದು ಪರಿಗಣಿಸಿ ಲಸಿಕೆ ನೀಡಬೇಕೆಂದು ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಅಧಿಕಾರಿಗಳಿಗೆ ಸೂಚಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲಸಿಕೆ ನೀಡುವುದಕ್ಕೆ ಸಂಬಂಧಿಸಿದಂತೆ ಮಂಗಳವಾರ ಆಯೋಜಿಸಲಾಗಿದ್ದ ಸಭೆಯಲ್ಲಿ ಮಾತನಾಡಿದರು. ಎಲ್ಲ ಅಧಿಕಾರಿಗಳು ಇಲಾಖಾವಾರು ಸಿಬ್ಬಂದಿ ವಿವರವನ್ನು ನಿಗದಿತ ನಮೂನೆಯಲ್ಲಿ ಸಮೀಪದ ತಾಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನೀಡಿ ಲಸಿಕಾ ದಿನವನ್ನು ನಿಗದಿಪಡಿಸಿಕೊಳ್ಳಬೇಕು. ಈಗಾಗಲೇ ಮೊದಲ ಡೋಸ್ ಪಡೆದು ನಿಗದಿತ ಅವಧಿ ಪೂರ್ಣಗೊಂಡವರಿಗೆ ಎರಡನೆ ಡೋಸ್ ನೀಡಬೇಕೆಂದು ಹೇಳಿದರು.

    ತಾಲೂಕು ಮಟ್ಟದಲ್ಲಿ ತಹಸೀಲ್ದಾರ್, ತಾಪಂ ಇಒ, ತಾಲೂಕು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಲಸಿಕೆ ಹಾಕಿಸಲು ವ್ಯವಸ್ಥೆ ಮಾಡಬೇಕು. ವಿದ್ಯುತ್ ಮತ್ತು ನೀರು ಸರಬರಾಜು, ಆಕ್ಸಿಜನ್ ಪ್ಲಾೃಂಟ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು, ಎಲ್ಲ ಇಲಾಖೆಗಳ ಗ್ರೂಪ್ ಡಿ ಸಿಬ್ಬಂದಿ, ಅಂಚೆ, ಸಾರಿಗೆ ಇಲಾಖೆ, ಜೈಲು ಸಿಬ್ಬಂದಿ ಮತ್ತು ಕೈದಿಗಳು, ಶಿಕ್ಷಕರು, ಮಾಧ್ಯಮದವರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಕೋವಿಡ್ ಆರೈಕೆ ಕೇಂದ್ರದ ಎಲ್ಲ ನೌಕರರು, ಅಂಗವಿಕಲರು ಹಾಗೂ ಒಬ್ಬ ಪಾಲಕರು, ಆಟೋ, ಕ್ಯಾಬ್ ಚಾಲಕರು, ಹೋಟೆಲ್ ಸಿಬ್ಬಂದಿ, ವಕೀಲರು, ಬೀದಿ ಬದಿ ವ್ಯಾಪಾರಸ್ಥರು ಸೇರಿ ಸಾರ್ವಜನಿಕರ ಸಂಪರ್ಕದಲ್ಲಿರುವ ಎಲ್ಲರನ್ನು ಗುರುತಿಸಿ ಪಟ್ಟಿ ಮಾಡಬೇಕು. ಒಂದು ವಾರದೊಳಗೆ ಎಲ್ಲರಿಗೂ ಲಸಿಕೆ ನೀಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

    ಜಿಪಂ ಸಿಇಒ ರಘುನಂದನಮೂರ್ತಿ, ಎಸ್ಪಿ ಟಿ.ಶ್ರೀಧರ, ಡಿವೈಎಸ್ಪಿ ಗೀತಾ ಬೇನಾಳ್, ಜಿಪಂ ಉಪ ಕಾರ್ಯದರ್ಶಿ ಶರಣಬಸಪ್ಪ, ಡಿಎಚ್‌ಒ ಡಾ.ಟಿ.ಲಿಂಗರಾಜ ಹಾಗೂ ಇತರ ಅಧಿಕಾರಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts