More

    ಮುಂದಿನ ಪೀಳಿಗೆಗೆ ಪರಿಸರ ಉಳಿಸಿ; ಗವಿಸಿದ್ಧೇಶ್ವರ ಸ್ವಾಮೀಜಿ ಸಲಹೆ

    ಕೊಪ್ಪಳ: ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಬಿಟ್ಟು ಹೋಗುವುದೇ ಮನುಕುಲಕ್ಕೆ ನಾವು ಮಾಡುವ ಮಹತ್ವದ ಉಪಕಾರ. ಇದನ್ನು ಪ್ರತಿಯೊಬ್ಬರೂ ಅರಿಯಬೇಕು ಎಂದು ಅಭಿನವ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ ಹೇಳಿದರು.

    ತಾಲೂಕಿನ ಗಿಣಿಗೇರಿ ಗ್ರಾಮದ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭಾನುವಾರ ಭೇಟಿ ನೀಡಿ ಮಾತನಾಡಿದರು. ನಮ್ಮ ಸುತ್ತಲಿನ ಪರಿಸರ, ಕೆರೆ, ನೀರಿನ ಮೂಲಗಳನ್ನು ಜೋಪಾನವಾಗಿ ಕಾಪಾಡುವುದು ನಮ್ಮ ಕರ್ತವ್ಯ. ಅದನ್ನು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು. ಕೆರೆ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ, ಸಂಸ್ಥೆ, ಮಹಿಳೆಯರು, ಯುವಕರು ಕೈಜೋಡಿಸಿದ್ದಾರೆ. ಎಲ್ಲರೂ ಶ್ರಮದಾನ ಮಾಡುತ್ತಿರುವುದು ಸಂತಸದ ವಿಷಯ ಎಂದರು.

    ಗಿಣಿಗೇರಿಯ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಕೆರೆ ಅಭಿವೃದ್ಧಿಗೆ 3.82 ಲಕ್ಷ ರೂ. ದೇಣಿಗೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts