25.1 C
Bangalore
Friday, December 6, 2019

ಕೊಪ್ಪಳ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆ

Latest News

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸ್​ ಆಯುಕ್ತ ವಿಶ್ವನಾಥ್​ ಸಜ್ಜನರ್​

ಹೈದರಾಬಾದ್​: ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದು ಮೃತದೇಹಕ್ಕೆ ಬೆಂಕಿಯಿಟ್ಟು ಕ್ರೂರತ್ವ ಮೆರೆದಿದ್ದ ನಾಲ್ವರು ಆರೋಪಿಗಳನ್ನು ಹೈದರಾಬಾದ್​ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಎನ್​ಕೌಂಟರ್​ ಮೂಲಕ...

ಯಾಂತ್ರಿಕ ಜೀವನಕ್ಕೆ ಮಾರುಹೋಗಿದ್ದಾರೆ ಜನ

ಕನಕಪುರ: ಯಾಂತ್ರಿಕ ಜೀವನಕ್ಕೆ ಮಾರುಹೋಗಿರುವ ಇಂದಿನ ಜನತೆ ಗ್ರಾಮೀಣ ಕಲೆ, ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ ಎಂದು ದೇಗುಲಮಠದ ಕಿರಿಯ ಶ್ರೀ ಚನ್ನಬಸವ ಸ್ವಾಮೀಜಿ ತಿಳಿಸಿದರು. ಕೋಡಿಹಳ್ಳಿ ರಂಗಮಂದಿರದಲ್ಲಿ ಕನ್ನಡ...

ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಎನ್​ಕೌಂಟರ್​​ ಅನ್ನು ಸ್ವಾಗತಿಸಿದ ಗೋವಾ ಕಾಂಗ್ರೆಸ್​​

ಪಣಜಿ: ಹೈದರಾಬಾದ್​ನಲ್ಲಿ ಶುಕ್ರವಾರ ಮುಂಜಾನೆ ದಿಶಾ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿದ್ದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್​​ನಲ್ಲಿ ಕೊಲೆ ಮಾಡಿದ್ದನ್ನು ಗೋವಾ ಕಾಂಗ್ರೆಸ್​ ಮಹಿಳಾ...

ಕೊಪ್ಪಳ: ಜಿಲ್ಲೆಯ ವಿವಿಧೆಡೆ ಎರಡು ದಿನಗಳಿಂದ ಉತ್ತಮ ಮಳೆ ಸುರಿಯುತ್ತಿದ್ದು, ರೈತ ವರ್ಗ ಹರ್ಷಗೊಂಡಿದ್ದು, ಕೆಲ ತೊಂದರೆಗಳು ಎದುರಾಗಿವೆ.
ಕೆಲ ಮನೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತಗೊಂಡಿದ್ದರೆ, ಇನ್ನೂ ಕೆಲ ಕಡೆ ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆಯಾಗಿದೆ. ಕೆಲವೆಡೆ ಚಂರಂಡಿಯಲ್ಲಿ ಘನ ತ್ಯಾಜ್ಯ ಇದ್ದ ಕಾರಣ ಕೊಳಚೆ ನೀರು ಮುಂದೆ ಹರಿಯದೇ ಓಣಿಗಳಲ್ಲಿ, ರಸ್ತೆ ಮೇಲೆ ಹರಿದು ವಾಹನ ಸಂಚಾರಕ್ಕೆ ಅಡೆ ತಡೆ ಉಂಟಾಯಿತು.

ಜನಜೀವನ ಅಸ್ತವ್ಯಸ್ತ

ಗಂಗಾವತಿ: ಕಳೆದೆರೆಡು ದಿನಗಳಿಂದ ತಾಲೂಕುದಾದ್ಯಂತ ಸುರಿಯುತ್ತಿರುವ ಮಳೆಯಿಂದ ನಗರ ಜನಜೀವನ ಅಸ್ತವ್ಯಸ್ತವಾಗಿದ್ದು, ಕೆಲ ವಾರ್ಡ್‌ಗಳ ಮನೆಗಳಲ್ಲಿ ನೀರು ನುಗ್ಗಿದೆ.

ಬೆಳಗ್ಗೆ ಮತ್ತು ರಾತ್ರಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಎಚ್‌ಆರ್‌ಎಸ್ ಕಾಲನಿ, ಮಹೆಬೂಬ್‌ನಗರ, ಲಕ್ಷ್ಮಿಕ್ಯಾಂಪ್, ಮುರಹರಿ ನಗರ ಪ್ರದೇಶದಲ್ಲಿ ನೀರು ನಿಂತಿದೆ. ಚರಂಡಿ ಸ್ವಚ್ಛಗೊಳಿಸದ ಕಾರಣ ಕೊಳಚೆ ನೀರು ತುಂಬಿ ಹರಿಯುತ್ತಿದೆ. ಎಚ್‌ಆರ್‌ಎಸ್ ಕಾಲನಿಯಲ್ಲಿ ಕೆಲ ಮನೆಗಳಿಗೆ ನೀರು ನುಗ್ಗಿದೆ. ಪ್ರಮುಖ ರಸ್ತೆ ಬಳಿಯ ಚರಂಡಿ ನೀರು ರಸ್ತೆಗೆ ನುಗ್ಗಿದ್ದರಿಂದ ಕಂದಾಯ ಭವನ, ಗಾಂಧಿ ವೃತ್ತದ ಬಳಿ ಸಂಚಾರಕ್ಕೆ ಅಡ್ಡಿಯಾಗಿತ್ತು. ಖಾಲಿ ಜಾಗದಲ್ಲಿ ನೀರು ನಿಂತ ಪರಿಣಾಮ ಸೊಳ್ಳೆಗಳು ಹೆಚ್ಚಾಗಿದ್ದು ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳಿವೆ. ಮಲ್ಲಾಪುರದ ಬಳಿ ಎಡದಂಡೆ ಕಾಲುವೆಗೆ ಬೆಟ್ಟದ ನೀರು ಹರಿದು ಬಂದಿದ್ದರಿಂದ ಎಸ್ಕೇಪ್ ಗೇಟ್ ಮೂಲಕ ದುರ್ಗಮ್ಮನಹಳ್ಳಕ್ಕೆ ನೀರು ಹರಿಬಿಡಲಾಗಿದೆ.
ಇಷ್ಟಿಷ್ಟಾಗಿದೆ ಮಳೆ :  ಗಂಗಾವತಿ ಹೋಬಳಿಯಲ್ಲಿ 6 ಮಿ.ಮೀ., ವೆಂಕಟಗಿರಿಯಲ್ಲಿ 3.1 ವಡ್ಡರಹಟ್ಟಿಯಲ್ಲಿ 25, ಕನಕಗಿರಿಯಲ್ಲಿ 4.8, ಹುಲಿಹೈದರ್‌ನಲ್ಲಿ 5.2 ಕಾರಟಗಿಯಲ್ಲಿ 14.2 ಮತ್ತು ಸಿದ್ದಾಪುರದಲ್ಲಿ 18 ಮಿ.ಮೀ. ಮಳೆಯಾಗಿದೆ. ಯಾವುದೇ ನಷ್ಟ ಸಂಭವಿಸಿಲ್ಲ ಎಂದು ತಹಸೀಲ್ದಾರ್ ವೀರೇಶ ಬಿರಾದಾರ್ ತಿಳಿಸಿದ್ದಾರೆ.

ಆಸ್ಪತ್ರೆ ಆವರಣಕ್ಕೆ ನುಗ್ಗಿದ ನೀರು

ಕುಷ್ಟಗಿ: ಪಟ್ಟಣ ಸೇರಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಗುರುವಾರ ಉತ್ತಮ ಮಳೆಯಾಗಿದ್ದು, ಕೆಲವೆಡೆ ಅವಾಂತರ ಸೃಷ್ಟಿಸಿದೆ. ಬುಧವಾರ ರಾತ್ರಿಯಿಂದ ಮಳೆರಾಯನ ಆಗಮನವಾಗಿದ್ದು, ಗುರುವಾರ ಬೆಳಗ್ಗೆ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಗ್ರಾಮೀಣ ಪ್ರದೇಶದಲ್ಲೂ ಮಳೆಯಾಗಿದ್ದು, ರೈತರ ಮುಖದಲ್ಲಿ ನಗು ಮೂಡಿಸಿದೆ. ತಾಲೂಕಾದ್ಯಂತ ಒಟ್ಟು 73.8 ಮಿ.ಮೀ.ಮಳೆ ಪ್ರಮಾಣ ದಾಖಲಾಗಿದೆ. ಪಟ್ಟಣದಲ್ಲಿ ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿದಿದ್ದು, ವಾಹನ ಸವಾರರು ತೊಂದರೆ ಅನುಭವಿಸುವಂತಾಯಿತು. ಚರಂಡಿಗಳಲ್ಲಿ ಕಸಕಡ್ಡಿ, ಪ್ಲಾಸ್ಟಿಕ್ ಚೀಲಗಳು ತುಂಬಿಕೊಂಡಿದ್ದು, ನೀರು ಹರಿಯುತ್ತಿಲ್ಲ. ಹೀಗಾಗಿ ಕೆಲ ವ್ಯಾಪಾರಿಗಳು ಅಂಗಡಿಗೆ ನೀರು ನುಗ್ಗದಂತೆ ತಾವೇ ಮುಂದೆ ನಿಂತು ಚರಂಡಿ ಸ್ವಚ್ಛಗೊಳಿಸಿದ ದೃಶ್ಯ ಕಂಡುಬಂತು. ಇನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೂ ಮಳೆ ನೀರು ನುಗ್ಗಿದ ಪರಿಣಾಮ ಕೆಲಕಾಲ ರೋಗಿಗಳು ಆಸ್ಪತ್ರೆಗೆ ಒಳ-ಹೊರಗೆ ಓಡಾಡದಂತಾಯಿತು. ನೀರಿನೊಂದಿಗೆ ಬಂದ ಪ್ಲಾಸ್ಟಿಕ್ ಚೀಲಗಳು, ಕಸಕಡ್ಡಿಯನ್ನು ಆಸ್ಪತ್ರೆ ಸಿಬ್ಬಂದಿ ಎತ್ತಿ ಹಾಕಿದರು.

ಯಲಬುರ್ಗಾಕ್ಕೆ ವರುಣನ ಕೃಪೆ

ಯಲಬುರ್ಗಾ: ಪಟ್ಟಣ ಸೇರಿ ತಾಲೂಕಿನ ವಿವಿಧೆಡೆ ಬುಧವಾರ ರಾತ್ರಿ ಉತ್ತಮ ಮಳೆ ಸುರಿದಿದೆ. ಯಲಬುರ್ಗಾದಲ್ಲಿ 115.0 ಮಿ.ಮೀ., ಹಿರೇವಂಕಲಕುಂಟಾದಲ್ಲಿ 9.8, ಕುಕನೂರಲ್ಲಿ 5.0, ಬೇವೂರಲ್ಲಿ 14.2, ಯಡ್ಡೋಣಿಯಲ್ಲಿ 24.0, ಮಂಗಳೂರಲ್ಲಿ 14.3, ನಿಂಗಾಪೂರಲ್ಲಿ 54.2 ಮಿ.ಮೀನಷ್ಟು ಮಳೆ ಸುರಿದಿದೆ.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...