18 C
Bangalore
Friday, December 6, 2019

ಪದವಿ ಪರೀಕ್ಷೆ ಶುಲ್ಕ ಹೆಚ್ಚಳಕ್ಕೆ ಖಂಡನೆ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಕೊಪ್ಪಳದಲ್ಲಿ ಎಸ್‌ಎ್ಐ ಪ್ರತಿಭಟನೆ

ಕೊಪ್ಪಳ: ಅಕ್ಕಮಹಾದೇವಿ ವಿವಿಯು ಪದವಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಏಕಾಏಕಿ ಹೆಚ್ಚಿಸಿದ್ದು, ತಕ್ಷಣ ಕಡಿಮೆ ಮಾಡಬೇಕೆಂದು ಒತ್ತಾಯಿಸಿ ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು.

ನವೆಂಬರ್‌ನಲ್ಲಿ ಬಿಎ, ಬಿಎಸ್ಸಿ, ಬಿಕಾಂ ಪದವಿಯ ಮೊದಲ, ತೃತೀಯ ಹಾಗೂ ಐದನೇ ಸೆಮಿಸ್ಟರ್ ಪರೀಕ್ಷೆಗಳಿವೆ. ಪರೀಕ್ಷಾ ಶುಲ್ಕವನ್ನು 980ರೂ. ನಿಗದಿ ಮಾಡಲಾಗಿದೆ. ಬಿಎಸ್ಸಿ ಪದವಿ ವಿದ್ಯಾರ್ಥಿನಿಯರಿಗೆ 1050ರೂ. ಹಾಗೂ ಘಟಿಕೋತ್ಸವ ಶುಲ್ಕವೆಂದು ಅಂತಿಮ ವರ್ಷದವರಿಗೆ 550ರೂ. ಹೆಚ್ಚುವರಿ ಹಣ ನೀಡುವಂತೆ ಸೂಚಿಸಿರುವುದು ಅವೈಜ್ಞಾನಿಕ. ಒಂದೆಡೆ ಸರ್ಕಾರ ಮಹಿಳೆಯರಿಗೆ ಉಚಿತ ಶಿಕ್ಷಣ ನೀಡುವುದಾಗಿ ಹೇಳುತ್ತಿದೆ. ಆದರೆ, ಪರೀಕ್ಷೆ ಸೇರಿ ಇತರ ವಿಷಯಗಳಲ್ಲಿ ಅನಗತ್ಯ ಶುಲ್ಕ ವಿಧಿಸುತ್ತಿರುವುದು ಖಂಡನೀಯ. ಇತರೆ ವಿವಿಗಳಲ್ಲಿ ಇರದ ಶುಲ್ಕ ಹೆಚ್ಚಳ ಮಹಿಳಾ ವಿವಿಯಲ್ಲಿ ಮಾತ್ರ ಯಾಕೆ ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದರು.

ತಕ್ಷಣ ಪರೀಕ್ಷಾ ಶುಲ್ಕವನ್ನು 120 ರೂ.ನಿಂದ 150ರೂ.ಗೆ ಇಳಿಸಬೇಕು. ಘಟಿಕೋತ್ಸವ ಶುಲ್ಕ ಕಡ್ಡಾಯ ಮಾಡಬಾರದು. ಎಸ್ಸಿ, ಎಸ್ಟಿ ಹಾಗೂ ಇತರ ವರ್ಗದ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯತಿ ನೀಡಬೇಕು. ಆದರೂ, ವಿವಿಗಳು ನೀಡುವುದಿಲ್ಲ. ಸರ್ಕಾರ ಹಾಗೂ ಉನ್ನತ ಶಿಕ್ಷಣ ಸಚಿವರು ಮಧ್ಯ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ತಡೆಯಬೇಕು. ವಾರದೊಳಗೆ ಶುಲ್ಕ ಪ್ರಮಾಣ ತಗ್ಗಿಸದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಸಿದರು.

ಎಸ್‌ಎಫ್‌ಐ ಸಂಚಾಲಕರಾದ ಸುಬಾನ್ ಸೈಯದ್, ಶಿವಕುಮಾರ ಯಮನೂರಪ್ಪ ಹೊಮ್ಮಿನಾಳ, ಶರಣಪ್ಪ, ಗೌಸುಸಾಬ್, ಕೃಷ್ಣ, ವಿದ್ಯಾರ್ಥಿನಿಯರಾದ ಐಶ್ವರ್ಯ, ಸುಸ್ಮಿತಾ, ಮೇಘಾ, ದಿವ್ಯ ನಂದಿನಿ, ಭುವನಾ, ಶೊಭಾ, ಇಮಾಂಬಿ ಅರ್ಚನಾ ನೇತ್ರಾವತಿ ಇತರರಿದ್ದರು.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...