More

    ಚುನಾವಣಾ ನಿಯಮ ಪಾಲಿಸುವಂತೆ ಸನ್ನದುದಾರರಿಗೆ ಡಿಸಿ ಸೂಚನೆ

    ಕೊಪ್ಪಳ: ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಜಾರಿಯಿರುವ ಅಬಕಾರಿ ನಿಯಮಗಳನ್ನು ಎಲ್ಲ ಸನ್ನದುದಾರರು ಕಡ್ಡಾಯವಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಸೂಚಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಬಕಾರಿ ಅಧಿಕಾರಿಗಳು ಹಾಗೂ ಜಿಲ್ಲೆಯ ಸನ್ನದುದಾರರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚುನಾವಣಾ ಆಯೋಗವು ಘೋಷಿಸುವ ಮದ್ಯ ಮುಕ್ತ ದಿನಗಳನ್ನು ಕಡ್ಡಾಯವಾಗಿ ಪಾಲಿಸಿ. ಯಾವುದೇ ಅಕ್ರಮ ಮದ್ಯ ಮಾರಾಟಕ್ಕೆ ಆಸ್ಪದ ನೀಡಬಾರದು. ಚುನಾವಣಾ ಕಾರಣಗಳಿಗೆ ಮದ್ಯ ಮಾರಾಟ ಮಾಡಬೇಡಿ. ಮದ್ಯದ ಅಂಗಡಿಗಳಲ್ಲಿ ಮದ್ಯ ಎತ್ತುವಳಿಯು ಅಸಹಜ ಅಥವಾ ಅಸಾಧಾರಣವೆನಿಸಿದ್ದಲ್ಲಿ ಕೂಡಲೇ ಅಬಕಾರಿ ಅಧಿಕಾರಿಗಳು ಅಂಡಿಯನ್ನು ಸಂಪೂರ್ಣವಾಗಿ ಪರಿಶೀಲಿಸಿ. ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳಿ. ಸನ್ನದು ಸ್ಥಳ ಹೊರತುಪಡಿಸಿ ಅನಧಿಕೃತವಾಗಿ ಬೇರೆ ಸ್ಥಳಗಳಲ್ಲಿ ಮದ್ಯ ಸಂಗ್ರಹಿಸಬಾರದು.

    ನಿಗದಿತ ಸಮಯದಲ್ಲಿ ಮಾತ್ರ ಮಾರಾಟ ಮಾಡಬೇಕು. ಸಮಾಜ ಘಾತುಕ ವ್ಯಕ್ತಿಗಳು ಮದ್ಯ ಮಾರಾಟ ಮಳಿಗೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಕೃತ್ಯಗಳನ್ನು ಎಸಗದಂತೆ ನೋಡಿಕೊಳ್ಳಿ. ಒಬ್ಬ ವ್ಯಕ್ತಿಗೆ ನಿಯಮಿತ ಮದ್ಯ ಮಾತ್ರ ನೀಡಿ. ಒಬ್ಬನೇ ವ್ಯಕ್ತಿ ಪದೇಪದೆ ಮದ್ಯಕ್ಕೆ ಬೇಡಿಕೆ ಸಲ್ಲಿಸಿದಲ್ಲಿ ನೀಡಬೇಡಿ. ಕರೊನಾ ಕಾರಣ ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಿ. ಅಬಕಾರಿ ಉಪ ಅಧೀಕ್ಷಕರು ಹಾಗೂ ಜಿಲ್ಲೆಯ ಎಲ್ಲ ಅಧೀನ ಅಬಕಾರಿ ಅಧಿಕಾರಿಗಳು ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಪ್ರವೃತ್ತರಾಗಿ ಎಂದು ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts