More

    ಪ್ರೌಢ ಶಾಲೆಗೆ ಮೂಲ ಸೌಲಭ್ಯ ಕಲ್ಪಿಸಲು ಆಗ್ರಹ

    ಕೊಪ್ಪಳ : ಹಾಲವರ್ತಿ ಗ್ರಾಮದ ಪ್ರೌಢ ಶಾಲೆಗೆ ಮೂಲ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎಐಡಿಎಸ್‌ಒ ಸಂಘಟನೆ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ನಗರದ ಕ್ಷೇತ್ರದ ಶಿಕ್ಷಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಬಿಇಒ ಮೈತ್ರಾದೇವಿ ರಡ್ಡಿಗೆ ಬುಧವಾರ ಮನವಿ ಸಲ್ಲಿಸಿದರು.

    ಗ್ರಾಮದಲ್ಲಿ ಪ್ರೌಢ ಶಾಲೆ ಪ್ರಾರಂಭಗೊಂಡು ಐದು ವರ್ಷ ಕಳೆದರೂ ಮೂಲ ಸೌಲಭ್ಯ ಕಲ್ಪಿಸಿಲ್ಲ. ಶಾಲೆಯಲ್ಲಿ ಶೌಚಗೃಹ, ಕುಡಿಯುವ ನೀರು, ವಿದ್ಯುತ್ ಇಲ್ಲವಾಗಿವೆ. ಶೌಚಗೃಹದ ಸಮಸ್ಯೆಯಿಂದ ಎಷ್ಟೋ ವಿದ್ಯಾರ್ಥಿಗಳು ಶಾಲೆಗೆ ಬರುತ್ತಿಲ್ಲ. ಹಾಗೆಯೇ ಶುದ್ಧ ಕುಡಿಯುವ ನೀರು ದೊರೆಯದ ಹಿನ್ನೆಲೆಯಲ್ಲಿ ಕಲುಷಿತ ನೀರು ಕುಡಿಯುವ ಪರಿಸ್ಥಿತಿ ಉದ್ಭಸಿದೆ. ಈ ಕಲುಷಿತ ನೀರನ್ನು ಸೇವಿಸುವುದರಿಂದ ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ತರಗತಿಗಳಲ್ಲಿ ಫ್ಯಾನ್, ಬಲ್ಬ್ ವ್ಯವಸ್ಥೆ ಇದ್ದರೂ ಸಹ ವಿದ್ಯುತ್ ಸಂಪರ್ಕವಿಲ್ಲ. ಸ್ಮಾರ್ಟ್‌ಕ್ಲಾಸ್ ಇದ್ದರೂ ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕೂಡಲೇ ಮೂಲಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಮನವಿ ಸ್ವೀಕರಿಸಿದ ಬಿಇಒ ಮಾತನಾಡಿ, ಶೀಘ್ರದಲ್ಲಿ ಮೂಲ ಸೌಲಭ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು. ಎಐಡಿಎಸ್‌ಓ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ, ಸದಸ್ಯರಾದ ಅಶೋಕ್, ಶಂಕರ್, ಪ್ರದೀಪ್, ಉಷಾ, ಮನೋಜ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts