ಸಂಭ್ರಮದ ಸ್ವಾತಂತ್ರ್ಯುತ್ಸವ ಆಚರಣೆ, ಸಚಿವ‌ ತಂಗಡಗಿಯಿಂದ ಧ್ವಜಾರೋಹಣ

IMG-20240815-WA0022
Published on

ಕೊಪ್ಪಳ: 78 ನೇ ಸ್ವಾತಂತ್ರ್ಯ ದಿನ‌ ಅಂಗವಾಗಿ‌ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾ ಉಸ್ತುವಾರಿ‌ ಸಚಿವ ಶಿವರಾಜ ತಂಗಡಗಿ ಧ್ವಜಾರೋಹಣ ನೆರವೇರಿಸಿದರು.

19 ತುಕಡಿಗಳ ಪಥ ಸಂಚಲನ ಗಮನ ಸೆಳೆಯಿತು. ಸ್ವಾತಂತ್ರೋತ್ಸವ ದಿನಾಚರಣೆಯ ಹಿನ್ನೆಲೆಯಲ್ಲಿ ಜಿಲ್ಲಾಡದಿಂದ ಜಿಲ್ಲಾ ಕ್ರೀಡಾಂಗಣದ ದ್ವಾರ ಬಾಗಿಲಿನಲ್ಲಿ ಇಡಲಾಗಿದ್ದ ಸಂವಿಧಾನ ಗ್ರಂಥ ಸಚಿವರು ವೀಕ್ಷಿಸಿದರು. ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ‌ ಜರುಗಿದವು. ಜಿಪಂನಿಂದ ವೈಯಕದತಿಕ ಶೌಚಗೃಹ ಬಳಕೆ ವಿಧಾನ ಮಾಹಿತಿ ಪ್ರಾತ್ಯಕ್ಷಿಕೆ ನಡೆಯಿತು.

ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾಘವೇಂದ್ರ ಹಿಟ್ನಾಳ, ವಿಪ ಸದಸ್ಯೆ ಹೇಮಲತಾ ನಾಯಕ, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಎಸ್ಪಿ ಡಾ.ರಾಮ್ ಎಲ್.ಅರಸಿದ್ದಿ, ಎಡಿಸಿ ಸಿದ್ರಾಮೇಶ್ವರ, ಎಎಸ್ಪಿ ಹೇಮಂತ್ ಕುಮಾರ್, ಎಸಿ ಕ್ಯಾ. ಮಹೇಶ ಮಾಲಗಿತ್ತಿ,, ತಹಸೀಲ್ದಾರ್ ವಿಠ್ಠಲ ಚೌಗಲಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net