More

    ಶಾಸನಗಳಿಂದ ಇತಿಹಾಸದ ಮೇಲೆ ಬೆಳಕು; ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ ಕುಮಾರ ಅಭಿಮತ

    ಕೊಪ್ಪಳ: ಶಾಸನಗಳು ಇತಿಹಾಸದ ಜೀವನಾಡಿ ಇದ್ದಂತೆ. ಅವು ಚರಿತ್ರೆಯ ಮೇಲೆ ಬೆಳಕು ಚೆಲ್ಲುತ್ತವೆ ಎಂದು ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ ಕುಮಾರ್ ಹೊಸಮನಿ ಹೇಳಿದರು.

    ನಗರದ ಸರ್ಕಾರಿ ನೌಕರರ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಉಪನ್ಯಾಸಕ ಸಿದ್ಧಲಿಂಗಪ್ಪ ಕೊಟ್ನೆಕಲ್ ಅವರ ಕೊಪ್ಪಳ ಜಿಲ್ಲೆಯ ಶಾಸನಗಳು ಮತ್ತು ಸಾಂಸ್ಕೃತಿಕ ಇತಿಹಾಸ ಹಾಗೂ ಸಂಸಾರ ಸಗ್ಗ ಪರಿಷ್ಕೃತ ಕೃತಿಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ನಗರದ ಗವಿಮಠ, ಮಳೆಮಲ್ಲೇಶ್ವರ ದೇವಾಲಯ ಹಾಗೂ ವಿವಿಧೆಡೆಯ ಶಾಸನಗಳು ಕೊಪ್ಪಳದ ಐತಿಹಾಸಿಕ ವೈಭವ ಸಾರುತ್ತವೆ. ಇಷ್ಟೆಲ್ಲ ಸಾಂಸ್ಕೃತಿಕ ಇತಿಹಾಸ ಹೊಂದಿರುವ ಕೊಪ್ಪಳ ವಿಶ್ವ ಮಾನ್ಯತೆಯ ಪ್ರವಾಸಿ ತಾಣವಾಗಬೇಕೆಂದು ಅಭಿಪ್ರಾಯಪಟ್ಟರು.

    ಸಾಹಿತಿ ಎಚ್.ಎಸ್.ಪಾಟೀಲ್ ಮಾತನಾಡಿ, ಕೊಪ್ಪಳ ಸಾಹಿತ್ಯಿಕ, ಸಾಂಸ್ಕೃತಿಕ, ಧಾರ್ಮಿಕ ಹಾಗೂ ಐತಿಹಾಸಿಕವಾಗಿ ಹೆಸರುವಾಸಿಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಡಿಜಿಟಲ್ ಗ್ರಂಥಾಲಯದ ಸದಸ್ಯತ್ವ ನೋಂದಣಿ ಮಾಡಲಾಯಿತು. ಸಾಹಿತಿಗಳಾದ ಅಲ್ಲಮಪ್ರಭು ಬೆಟ್ಟದೂರ, ವಿಠ್ಠಪ್ಪ ಗೋರಂಟ್ಲಿ, ಪ್ರಾಧ್ಯಾಪಕ ಶರಣಬಸಪ್ಪ ಬಿಳೆಎಲೆ, ವಿಎಸ್‌ಕೆ ವಿವಿ ಸಿಂಡಿಕೇಟ್ ಸದಸ್ಯ ಬಸವರಾಜ ಪೂಜಾರ್, ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಧಿಕಾರಿ ಎಂ.ಎಸ್ ರೆಬಿನಾಳ ಹಾಗೂ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts