More

    ನೋಂದಣಿ ಮಾಡಿಸದೆ ಸೌಲಭ್ಯದಿಂದ ವಂಚಿತ ; ನ್ಯಾಯಾಧೀಶ ದೇವೇಂದ್ರ ಪಂಡಿತ್ ಹೇಳಿಕೆ

    ಕಾರ್ಮಿಕರಿಗೆ ಕಿಟ್‌ಗಳ ವಿತರಣೆ

    ಕೊಪ್ಪಳ: ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ಹಲವು ಯೋಜನೆಗಳಿದ್ದು, ಅವುಗಳ ಪ್ರಯೋಜನ ಪಡೆದುಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶ ದೇವೇಂದ್ರ ಪಂಡಿತ್ ಹೇಳಿದರು.

    ತಾಲೂಕಿನ ಕಿನ್ನಾಳದಲ್ಲಿ ಕಾರ್ಮಿಕ ಇಲಾಖೆ, ಕಾನೂನು ಸೇವಾ ಪ್ರಾಧಿಕಾರ ಹಾಗೂ ಸಿದ್ಧರಾಮೇಶ್ವರ ಕಟ್ಟಡ ನಿರ್ಮಾಣ ಹಾಗೂ ಬಾರ್ ಬೆಂಡಿಂಗ್ ಕಾರ್ಮಿಕರ ಸಂಘದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಆಹಾರದ ಕಿಟ್‌ಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿರುವ ಹಲವಾರು ಕಾರ್ಮಿಕರು ಇಲಾಖೆಯಲ್ಲಿ ನೋಂದಣಿ ಮಾಡಿಸದೆ ಇಲಾಖೆಯಿಂದ ದೊರೆಯುವ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಅಂತಹ ಕಾರ್ಮಿಕರನ್ನು ಗುರುತಿಸಿ ನೋಂದಣಿ ಮಾಡಿಸುವ ಕೆಲಸವಾಗಬೇಕು ಎಂದರು.

    ಸಾಮಾಜಿಕ ಪಿಡುಗುಗಳ ನಿವಾರಣೆಗೆ ಪ್ರಯತ್ನಿಸಬೇಕು. ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈ ಜೋಡಿಸಬೇಕು. ಅಂತಹ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತರಬೇಕು ಎಂದು ನ್ಯಾಯಾಧೀಶ ದೇವೇಂದ್ರ ಪಂಡಿತ್ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts