More

    ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ

    ಕೊಪ್ಪಳ: ದೇಶದ 75ನೇ ಸ್ವಾತಂತ್ರೊೃೀತ್ಸವದ ಸವಿನೆನಪಿಗಾಗಿ ಸರ್ಕಾರ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಸಮರ್ಪಕ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಹೇಳಿದರು.

    ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 74ನೇ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಶುಕ್ರವಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ದೇಶದಲ್ಲಿ ವರ್ಷಕ್ಕೆ ಒಮ್ಮೆ ಸ್ವಾತಂತ್ರೃ ದಿನ ಬಂದರೆ, ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಎರಡು ಸ್ವಾತಂತ್ರೃ ದಿನ ಆಚರಿಸುವ ಸುಯೋಗ ಸಿಕ್ಕಿದೆ. ದೇಶ ಬ್ರಿಟಿಷರಿಂದ ಸ್ವತಂತ್ರಗೊಂಡರೂ, ಹೈದರಾಬಾದ್ ನಿಜಾಮರಿಂದ ಮುಕ್ತಿ ಸಿಕ್ಕಿರಲಿಲ್ಲ. ಜಿಲ್ಲೆಯ ಶಿವಮೂರ್ತಿಸ್ವಾಮಿ ಅಳವಂಡಿ, ಪುಂಡಲೀಕಪ್ಪ ಜ್ಞಾನಮೋಠೆ, ವೀರಭದ್ರಪ್ಪ ಶಿರೂರು, ಸಿ.ಎಂ.ಚುರ್ಚಿಹಾಳ ಮಠ, ಸೋಮಪ್ಪ ಡಂಬಳ ಸೇರಿದಂತೆ ಅನೇಕರ ಹೋರಾಟದ ಫಲವಾಗಿ ಸೆ.17, 1948ರಂದು ಕಲ್ಯಾಣ ಕರ್ನಾಟಕ ಪ್ರದೇಶ ಸ್ವಾತಂತ್ರೃ ಪಡೆಯಿತು ಎಂದರು.

    ಶಾಸಕ ರಾಘವೇಂದ್ರ ಹಿಟ್ನಾಳ್, ಸಂಸದ ಸಂಗಣ್ಣ ಕರಡಿ, ನಗರಸಭೆ ಅಧ್ಯಕ್ಷೆ ಲತಾ ಗವಿಸಿದ್ದಪ್ಪ ಚಿನ್ನೂರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ್, ಡಿಸಿ ಎಸ್.ವಿಕಾಸ್ ಕಿಶೋರ್, ಜಿಪಂ ಸಿಇಒ ಫೌಜಿಯಾ ತರನ್ನುಮ್, ಎಡಿಸಿ ಎಂ.ಪಿ.ಮಾರುತಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ಹೇಮಂತ್ ಕುಮಾರ್, ಉಪವಿಭಾಗಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಡಿವೈಎಸ್ಪಿ ಗೀತಾ ಬೇನಾಳ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts