More

    ಕಾರ್ಮಿಕರಿಗೆ ಹೆಚ್ಚಿನ ಸೌಲಭ್ಯ ನೀಡಲು ಸಿಐಟಿಯುನಿಂದ ಅಪರ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ

    ಕೊಪ್ಪಳ: ಲಾಕ್‌ಡೌನ್‌ನಿಂದಾಗಿ ಕಾರ್ಮಿಕರು ಸಂಕಷ್ಟದಲ್ಲಿದ್ದು, ಸರ್ಕಾರ ಹೆಚ್ಚಿನ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಸಿಐಟಿಯು ಜಿಲ್ಲಾ ಘಟಕ ಗುರುವಾರ ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.

    ಕರೊನಾ ಪ್ರಕರಣಗಳು ಕಡಿಮೆಯಾಗಿದ್ದರೂ, ಕಾರ್ಮಿಕರಿಗಾಗಿರುವ ನಷ್ಟ ಭರ್ತಿ ಸಾಧ್ಯವಾಗಿಲ್ಲ. ಕಾರ್ಮಿಕರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ, ಸರ್ಕಾರ ಪುಡಗಾಸಿನ ಪರಿಹಾರ ನೀಡಿ ಸುಮ್ಮನಾಗುತ್ತಿದೆ. ಇದರಿಂದ ಜೀವನ ರೂಪಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಕಟ್ಟಡ ಕಾರ್ಮಿಕರಿಗೆ ಕೋವಿಡ್ ಪರಿಹಾರ ಹೆಚ್ಚಿಸಬೇಕು. ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು. ಎಲ್ಲ ವರ್ಗದ ಕಾರ್ಮಿಕರಿಗೆ ರೇಷನ್ ಕಿಟ್‌ಗಳನ್ನು ನೀಡಬೇಕು. ಕೋವಿಡ್ ಸೇನಾನಿಗಳಿಗೆ ಆರ್ಥಿಕ ಭದ್ರತೆ ಕಲ್ಪಿಸಬೇಕು. ಸಾರಿಗೆ ನೌಕರರ ಮೇಲೆ ಎಸ್ಮಾ ಕಾಯ್ದೆ ಜಾರಿ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು. ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಸಿಂ ಸರ್ದಾರ, ತಾಲೂಕು ಅಧ್ಯಕ್ಷ ಹನುಮೇಶ ಕಲ್ಮಂಗಿ, ಶೇಖಪ್ಪ ಚೌಡ್ಕಿ, ಬಸವರಾಜ ಕಂಠಿ ಮತ್ತು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts