More

    ಸ್ಥಳೀಯ ಸಂಸ್ಥೆಗಳಿಗೆ ಮತದಾನ ನಾಳೆ; ಜಿಲ್ಲೆಯ ಕಾರಟಗಿ, ಭಾಗ್ಯನಗರ, ಕನಕಗಿರಿ, ತಾವರಗೇರಾ, ಕುಕನೂರಿನಲ್ಲಿ ವೋಟಿಂಗ್



    ಕೊಪ್ಪಳ: ಜಿಲ್ಲೆಯ ಐದು ನಗರ, ಸ್ಥಳೀಯ ಸಂಸ್ಥೆಗಳಿಗೆ ಡಿ.27ರಂದು ಮತದಾನ ನಡೆಯಲಿದೆ. ಚುನಾವಣಾ ಸಿಬ್ಬಂದಿ ಭಾನುವಾರ ಮತಯಂತ್ರಗಳೊಂದಿಗೆ ಮತಗಟ್ಟೆಗಳಿಗೆ ತೆರಳಿದರು.

    ಕಾರಟಗಿ ಪುರಸಭೆ, ಭಾಗ್ಯನಗರ, ಕನಕಗಿರಿ, ತಾವರಗೇರಾ ಹಾಗೂ ಕುಕನೂರು ಪಟ್ಟಣ ಪಂಚಾಯಿತಿಗಳಿಗೆ ಮತದಾನ ನಡೆಯಲಿದೆ. ಕಾರಟಗಿ ಕರ್ನಾಟಕ ಪಬ್ಲಿಕ್ ಶಾಲೆ, ಕನಕಗಿರಿ ಸರ್ಕಾರಿ ಪಿಯು ಕಾಲೇಜು, ಭಾಗ್ಯನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಷ್ಟಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಕುಕನೂರಿನ ವಿದ್ಯಾನಂದ ಗುರುಕುಲದಲ್ಲಿ ಮಸ್ಟರಿಂಗ್ ಕಾರ್ಯ ನಡೆಯಿತು.

    ಒಟ್ಟು 96 ವಾರ್ಡ್‌ಗಳ ಪೈಕಿ 6 ವಾರ್ಡ್‌ಗಳಲ್ಲಿ ಅವಿರೋಧ ಆಯ್ಕೆ ನಡೆದಿದೆ. 90 ವಾರ್ಡ್‌ಗಳಿಗೆ ಸದಸ್ಯರನ್ನು ಆಯ್ಕೆ ಮಾಡಲು ಮತದಾರರು ಹಕ್ಕು ಚಲಾಯಿಸಲಿದ್ದಾರೆ. 94 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಭಾಗ್ಯನಗರದಲ್ಲಿ 1, ಕನಕಗಿರಿ 6, ಕಾರಟಗಿ, ತಾವರಗೇರಾ ಹಾಗೂ ಕುಕನೂರಿನಲ್ಲಿ ತಲಾ 5 ಒಟ್ಟು 22 ಅತಿ ಸೂಕ್ಷ್ಮ ಮತಗಟ್ಟೆಗಳಿವೆ. 32 ಸೂಕ್ಷ್ಮ, 40 ಸಾಮಾನ್ಯ ಮತಗಟ್ಟೆಗಳೆಂದು ಗುರುತಿಸಲಾಗಿದೆ.

    ಐದು ಸಂಸ್ಥೆಗಳ 94 ಮತಗಟ್ಟೆಗಳಿಗೆ 105 ಪಿಆರ್‌ಒ, 105 ಎಆರ್‌ಒ, ಪ್ರತಿ ಮತಗಟ್ಟೆಗೆ ಇಬ್ಬರು ಪಿಒ ಹಾಗೂ 94 ಡಿ ಗ್ರೂಪ್ ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಪ್ರತಿ ಒಂದು ಸ್ಥಳೀಯ ಸಂಸ್ಥೆಗೆ ಒಬ್ಬ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿ ಹಾಗೂ ಮಾದರಿ ನೀತಿ ಸಂಹಿತೆ ಮೇಲೆ ನಿಗಾ ವಹಿಸಲು ಒಬ್ಬ ಅಧಿಕಾರಿಯನ್ನು ನೇಮಿಸಲಾಗಿದೆ. ಚುನಾವಣಾ ಸಿಬ್ಬಂದಿಗೆ 15 ಸರ್ಕಾರಿ ಜೀಪ್‌ಗಳು ಹಾಗೂ 20 ಕ್ರೂಸರ್‌ಗಳ ವ್ಯವಸ್ಥೆ ಮಾಡಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts