More

    ಲಾಕ್‌ಡೌನ್ ಸಡಿಲಿಕೆಯಿಂದ ಮಾರುಕಟ್ಟೆಯಲ್ಲಿ ಜನಸಂದಣಿ

    ಕೊಪ್ಪಳ: ಜಿಲ್ಲೆಯಲ್ಲಿ ಶನಿವಾರ ಅಗತ್ಯ ವಸ್ತುಗಳ ಖರೀದಿಗಾಗಿ ಲಾಕ್‌ಡೌನ್ ಸಡಿಲಿಕೆ ಮಾಡಿದ್ದರಿಂದ ಅಗತ್ಯ ವಸ್ತುಗಳನ್ನು ಕೊಳ್ಳಲು ಜನರು ಮುಗಿಬಿದ್ದರು. ಬೆಳಗ್ಗೆ 10 ಗಂಟೆ ಬಳಿಕವೂ ಜನ ದಟ್ಟಣೆ ಕಡಿಮೆಯಾಗಲಿಲ್ಲ. ಇದರಿಂದಾಗಿ ಜನರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸಪಡಬೇಕಾಯಿತು.

    ಮೇ 17ರಿಂದ 21ರವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗಿತ್ತು. ಮೇ 24ರಿಂದ ಏಳು ದಿನ ಮತ್ತೆ ಸಂಪೂರ್ಣ ಲಾಕ್‌ಡೌನ್ ಜಾರಿಯಾಗಲಿದೆ. ಇದರಿಂದಾಗಿ ಶನಿವಾರ ಹಾಗೂ ಭಾನುವಾರ ಬೆಳಗ್ಗೆ 6ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಶನಿವಾರ ತರಕಾರಿ ಮಾರುಕಟ್ಟೆ, ದಿನಸಿ ಅಂಗಡಿಗಳು, ಬಾರ್ ಸೇರಿ ವಿವಿಧೆಡೆ ಜನರ ದಂಡು ಕಂಡುಬಂತು. ಜನರು ಮಾಸ್ಕ್ ಧರಿಸಿದ್ದರೂ, ಪರಸ್ಪರ ಅಂತರ ಕಾಯ್ದುಕೊಂಡಿರಲಿಲ್ಲ. ರಸ್ತೆಗಳಲ್ಲಿ ವಾಹನ ದಟ್ಟಣೆ ಕೂಡ ಇತ್ತು.

    10ಗಂಟೆ ಬಳಿಕವೂ ವಹಿವಾಟು ಮುಂದುವರಿದಿತ್ತು. ಪೊಲೀಸರು ಒತ್ತಾಯದಿಂದ ಅಂಗಡಿಗಳನ್ನು ಮುಚ್ಚಿಸಿ ಜನರನ್ನು ಮನೆಗೆ ಕಳುಹಿಸಿದರು. 5 ದಿನ ಸಂಪೂರ್ಣ ಲಾಕ್‌ಡೌನ್ ಮಾಡಿದ್ದರಿಂದ ಮನೆಯಲ್ಲಿ ಅಗತ್ಯ ವಸ್ತುಗಳಿಲ್ಲ. ಖರೀದಿಗೆ ಅವಕಾಶ ಮಾಡಿಕೊಡಿ ಎಂದು ಕೆಲವರು ಪೊಲೀಸರ ಜತೆ ವಾದ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts