More

    ರೈತ-ಗ್ರಾಹಕರಿಗೆ ಮಾವು ಮೇಳ ಅನುಕೂಲ: ಸಚಿವ ಹಾಲಪ್ಪ ಆಚಾರ್ ಹೇಳಿಕೆ


    ಕೊಪ್ಪಳ: ತೋಟಗಾರಿಕೆ ಇಲಾಖೆಯಿಂದ ಪ್ರತಿ ವರ್ಷದಂತೆ ಮೇ 30ವರೆಗೆ ಮಾವು ಮೇಳ ಹಮ್ಮಿಕೊಂಡಿದ್ದು, ಗ್ರಾಹಕರು ಹಾಗೂ ರೈತರಿಗೆ ಅನುಕೂಲವಾಗಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ ಹೇಳಿದರು.

    ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಹಮ್ಮಿಕೊಂಡಿರುವ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು. ಬೆಳೆಗಾರರಿಗೆ ಮಾರುಕಟ್ಟೆಯದ್ದೇ ದೊಡ್ಡ ಸಮಸ್ಯೆಯಾಗಿದೆ. ಅದನ್ನು ನೀಗಿಸಲು ತೋಟಗಾರಿಕೆ ಇಲಾಖೆ ಪ್ರತಿ ವರ್ಷ ಮೇಳ ಆಯೋಜಿಸಿ ಅನುಕೂಲ ಮಾಡುತ್ತಿದೆ. 10 ಎಕರೆ ಪ್ರದೇಶದಲ್ಲಿ ಹಣ್ಣುಗಳ ಮೌಲವಧರ್ನೆ ಮಾಡಲು ಸಂಸ್ಕರಣಾ ಘಟಕ ಸ್ಥಾಪನೆಗೆ ಯೋಜಿಸಲಾಗಿದೆ. ಪೇರಲ, ಪಪ್ಪಾಯ, ಮಾವು ಸೇರಿದಂತೆ ಇತರ ಹಣ್ಣುಗಳ ಮೌಲ್ಯವರ್ಧನೆ ಮಾಡುವುದರಿಂದ ರೈತರು ಹೆಚ್ಚಿನ ಲಾಭ ಗಳಿಸಬಹುದು. ಇತ್ತೀಚೆಗೆ ಸುರಿದ ಮಳೆಯಿಂದ ಮಾವು ಬೆಳೆ ಹಾನಿಯಾಗಿದೆ. ಅದರ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಸರ್ಕಾರದಿಂದ ತಕ್ಷಣ ಪರಿಹಾರ ಕೊಡಿಸಲಾಗವುದು ಎಂದರು. ತೋಟಗಾರಿಕೆ ಇಲಾಖೆ ಸಿದ್ಧಪಡಿಸಿದ ಪರಿಸರ ಸ್ನೇಹಿ ಬ್ಯಾಗ್‌ಗಳನ್ನು ಗಣ್ಯರು ಬಿಡುಗಡೆಗೊಳಿಸಿದರು. ಮೇಳದಲ್ಲಿ ಸುತ್ತಾಡಿದ ಸಚಿವರು ವಿವಿಧ ಹಣ್ಣಗಳನ್ನು ಸವಿದರು.

    ಡಿಜಿಟಲ್ ಟಚ್ : ಮೇಳಕ್ಕೆ ಈ ಬಾರಿ ಡಿಜಿಟಲ್ ಟಚ್ ನೀಡಲಾಗಿದೆ. 100ಕ್ಕೂ ಅಧಿಕ ತಳಿಯ ಹಣ್ಣುಗಳನ್ನು ಪ್ರದರ್ಶನಕ್ಕಿಡಲಾಗಿದೆ. ಗ್ರಾಹಕರು ಮನೆಯಲ್ಲಿಯೇ ಕುಳಿತು ತಮ್ಮಿಷ್ಟದ ಮಾವು ತರಿಸಿಕೊಳ್ಳಬಹುದು. ತೋಟಗಾರಿಕೆ ಇಲಾಖೆ ಕೊಪ್ಪಳ ಒನ್ ಸಂಸ್ಥೆ ಸಹಯೋಗದಲ್ಲಿ ಕೊಪ್ಪಳ-ಒನ್ ಹೆಸರಿನ ಆ್ಯಪ್ ಸಿದ್ಧಪಡಿಸಿದ್ದು, ಗೂಗಲ್ ಪ್ಲೇಸ್ಟೋರ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅದರಲ್ಲಿ ಆರ್ಡರ್ ಮಾಡಿದಲ್ಲಿ ಮಾವು ನಿಮ್ಮ ಮನೆ ತಲುಪಲಿದೆ.

    ರೈತ-ಗ್ರಾಹಕರಿಗೆ ಮಾವು ಮೇಳ ಅನುಕೂಲ: ಸಚಿವ ಹಾಲಪ್ಪ ಆಚಾರ್ ಹೇಳಿಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts