ಸಂಬಳ ಕೊಡಿ ಇಲ್ಲವೇ ಸಾಮೂಹಿಕ ಆತ್ಮಹತ್ಯೆಗೆ ಅವಕಾಶ ಕೊಡಿ

ಕೊಪ್ಪಳ: ಕಾರ್ಮಿಕರಿಗೆ ವೇತನ ನೀಡದ ಹಿನ್ನೆಲೆಯಲ್ಲಿ ಮನನೊಂದು ಸಾಮೂಹಿಕ ಆತ್ಮಹತ್ಯೆಗೆ ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಲಾಗಿದೆ.

ಕೊಪ್ಪಳ ನಗರಸಭೆ ಕಾರ್ಮಿಕರಿಗೆ ಕಳೆದ 10 ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರಿಗೆ ಸಾಮೂಹಿಕ ಆತ್ಮಹತ್ಯೆಗೆ ಅವಕಾಶ ನೀಡುವಂತೆ ಪತ್ರ ಬರೆದಿದ್ದಾರೆ.

ತಾಂತ್ರಿಕ ಕಾರಣದ ನೆಪವೊಡ್ಡಿ ವೇತನವನ್ನು ನಗರಸಭೆ ತಡೆ ಹಿಡಿದಿದ್ದು, ಇಂದು ಡಿಸಿ ಕಚೇರಿ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರ ಬರೆದಿದ್ದಾರೆ. ಈ ಬಗ್ಗೆ ವಾರದ ಹಿಂದೆಯೇ ಪತ್ರ ಬರೆದಿದ್ದರೂ ಜಿಲ್ಲಾಧಿಕಾರಿ ಸ್ಪಂದಿಸದೇ ಇರುವುದರಿಂದ ನೊಂದ ಕಾರ್ಮಿಕರು ಈ ಬಾರಿ ಆತ್ಮಹತ್ಯೆ ಮಾಡಿಕೊಳ್ಳುವ ಕುರಿತು ಪತ್ರ ಬರೆದಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *