More

    ಪ್ರೋತ್ಸಾಹ ಧನ ಹೆಚ್ಚಳ ಮಾಡಿ; ಪ್ರಾಂತ ಕೃಷಿ ಕೂಲಿಕಾರರ ಸಂಘ ಪ್ರತಿಭಟನೆ

    ಕೊಪ್ಪಳ: ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಕಾಯಕ ಬಂಧುಗಳ ಪ್ರೋತ್ಸಾಹ ಧನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಪ್ರಾಂತ ಕೃಷಿ ಕೂಲಿಕಾರರ ಸಂಘದ ತಾಲೂಕು ಸಮಿತಿ ಪದಾಧಿಕಾರಿಗಳು ಸೋಮವಾರ ನಗರದ ತಾಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

    ನರೇಗಾ ಬಾಕಿ ಅನುದಾನ ಬಿಡುಗಡೆಗೆ ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ನರೇಗಾ ಯೋಜನೆ ದೇಶದ ಶೇ.52 ಜನರ ಜೀವನಾಧಾರವಾಗಿದೆ. ಯೋಜನೆಯಿಂದ ಗ್ರಾಮೀಣ ಪ್ರದೇಶದ ನಿರುದ್ಯೋಗ ಪ್ರಮಾಣ ಕಡಿಮೆಯಾಗಿದೆ. ಇಂಥ ಜನಪರ ಯೋಜನೆಗೆ ಕೇಂದ್ರ ಸರ್ಕಾರ ವರ್ಷದಿಂದ ವರ್ಷಕ್ಕೆ ಅನುದಾನ ಕೊರತೆ ಮಾಡುತ್ತಿರುವುದು ಸರಿಯಲ್ಲ. ಈ ವರ್ಷ 9 ಸಾವಿರ ಕೋಟಿ ರೂ. ಅನುದಾನ ಬಾಕಿ ಉಳಿಸಿಕೊಳ್ಳಲಾಗಿದೆ. 35 ರಾಜ್ಯಗಳ ಪೈಕಿ 21 ರಾಜ್ಯಗಳಲ್ಲಿ ಯೋಜನೆ ಜಾರಿಗೆ ಅನುದಾನವೇ ಇಲ್ಲ.

    ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಪ್ರೋತ್ಸಾಹ ಧನ ಆಧಾರದಡಿ ಕಾಯಕ ಬಂಧುಗಳನ್ನು ನೇಮಿಸಲಾಗಿದೆ. ನೇಮಕ ಮಾಡಿದಾಗಿನಿಂದಲೂ ಪ್ರೋತ್ಸಾಹಧನ ಹೆಚ್ಚಳ ಮಾಡಿಲ್ಲ. ಬಾಕಿ ಪ್ರೋತ್ಸಾಹ ಧನ ಕೂಡಲೇ ಬಿಡುಗಡೆ ಮಾಡಬೇಕು. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಪಾವತಿಸಬೇಕು. ನಗರ ಪ್ರದೇಶದ ಕೂಲಿಕಾರರಿಗೆ ಪ್ರತ್ಯೇಕ ಯೋಜನೆ ಜಾರಿಗೊಳಿಸಬೇಕು. ವರ್ಷದಲ್ಲಿ ಕನಿಷ್ಠ 200 ದಿನ ಕೂಲಿ ಕೆಲಸ ನೀಡಬೇಕು ಎಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts