More

    ಅಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡಿ; ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸೂಚನೆ

    ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ರಚಿಸಲಾಗಿರುವ ವಿವಿಧ ಇಲಾಖೆ ಅಧಿಕಾರಿಗಳ ತಂಡ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಸೂಚಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರೊನಾ ನಿರ್ವಹಣೆಗೆ ಸಂಬಂಧಿಸಿದ ಸಭೆಯಲ್ಲಿ ಮಾತನಾಡಿದರು. ಆರೋಗ್ಯ, ಕಂದಾಯ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ಇನ್ನೂ ಹೆಚ್ಚಿನ ಮಾನವ ಸಂಪನ್ಮೂಲ ಅಗತ್ಯ ಇರುವುದರಿಂದ ಇತರ ಇಲಾಖೆ ಅಧಿಕಾರಿಗಳನ್ನು ಕರೊನಾ ನಿರ್ವಹಣೆ ಕೆಲಸಕ್ಕೆ ನಿಯೋಜಿಸಲಾಗುತ್ತಿದೆ. ಅಧಿಕಾರಿಗಳು ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಬೇಜವಾಬ್ದಾರಿ ತೋರಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

    ಜಿಲ್ಲೆಯ ವಿವಿಧೆಡೆ ಹಾಸ್ಟೆಲ್ ಮತ್ತು ಶಾಲೆಗಳಲ್ಲಿ ಕೋವಿಡ್ ಕೇರ್ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳ ಕಟ್ಟಡ ನಿರ್ವಹಣೆಯ ಎಲ್ಲ ಜವಾಬ್ದಾರಿಗಳನ್ನು ಲೋಕೋಪಯೋಗಿ, ಪಂಚಾಯತ್‌ರಾಜ್ ಇಂಜಿನಿಯರಿಂಗ್ ವಿಭಾಗ ಹಾಗೂ ಕೆಆರ್‌ಐಡಿಎಲ್ ಇಲಾಖೆಗಳಿಗೆ ತಾಲೂಕುವಾರು ಹಂಚಿಕೆ ಮಾಡಲಾಗುವುದು. ಕೋವಿಡ್ ಕೇಂದ್ರಗಳಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕು.

    ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಂದ ಬಂದವರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಕೇಂದ್ರಗಳಿಗೆ ದಾಖಲಿಸಬೇಕು. ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪತ್ತೆಗೆ ಶಿಕ್ಷಕರನ್ನು ನಿಯೋಜಿಸಬೇಕು. ವಲಸೆ ಕಾರ್ಮಿಕರನ್ನು ಪತ್ತೆ ಮಾಡಿ ಕ್ವಾರಂಟೈನ್ ಮಾಡಿಸುವಂತೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಡಿಡಿಪಿಐ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗೆ ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts