More

    ರಾಜ್ಯೋತ್ಸವ ಅರ್ಥಪೂರ್ಣ ಆಚರಣೆ, ಡಿಸಿ ವಿಕಾಸ್ ಕಿಶೋರ್ ಹೇಳಿಕೆ

    ಕೊಪ್ಪಳ: ಈ ಬಾರಿ ಜಿಲ್ಲಾ ಕೇಂದ್ರದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕಿದ್ದು, ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಡಿಸಿ ಎಸ್.ವಿಕಾಸ್ ಕಿಶೋರ್ ಸೂಚಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ನ.1ರಂದು ನಗರದ ತಹಸಿಲ್ ಕಚೇರಿಯಲ್ಲಿ ಭುವನೇಶ್ವರಿ ದೇವಿ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಬಳಿಕ ಅಶೋಕ ವೃತ್ತ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣವರೆಗೆ ಮೆರವಣಿಗೆ ನಡೆಯಲಿದೆ. ಬೆಳಗ್ಗೆ 9ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ. ವೇದಿಕೆ ಅಲಂಕಾರ, ಪಥಸಂಚಲನ ತಂಡಗಳಿಗೆ ಲಘು ಉಪಹಾರ, ಶಾಂತಿ, ಸುವ್ಯವಸ್ಥೆ ಕಾಪಾಡಲು ಅಗತ್ಯ ಪೊಲೀಸ್ ಭದ್ರತೆ, ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಇರಲಿ. ಆಯಾ ತಂಡಗಳಿಗೆ ವಹಿಸುವ ಜವಾಬ್ದಾರಿ ಅಚ್ಚುಕಟ್ಟಾಗಿ ನಿರ್ವಹಿಸಿ ಎಂದು ಸೂಚಿಸಿದರು.

    ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಗುವುದು. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಜಿಲ್ಲಾ ಕ್ರೀಡಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ಕೊನೇ ಕ್ಷಣದ ಬದಲಾವಣೆಗೆ ಅವಕಾಶವಿಲ್ಲ. ಸಾರಿಗೆ ಇಲಾಖೆಯವರು ಮಾತ್ರ ಕ್ರೀಡಾಂಗಣದಲ್ಲಿ ಸ್ತಬ್ಧಚಿತ್ರ ಪ್ರದರ್ಶಿಸಬಹುದು ಎಂದರು. ಜಿಪಂ ಸಿಇಒ ಫೌಜಿಯಾ ತರನ್ನುಮ್, ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಂ.ಗಂಗಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ಕೆ.ರಂಗಣ್ಣನವರ್, ಜಂಟಿ ಕೃಷಿ ನಿರ್ದೇಶಕ ಸದಾಶಿವ, ಸಮಾಜ ಕಲ್ಯಾಣ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನವೀನ್ ಸಿಂತ್ರೆ, ಡಿಡಿಪಿಐ ದೊಡ್ಡಬಸಪ್ಪ ನೀರಲಕೇರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts