More

    ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ಹೇಳಿದ ಸಚಿವ ಆನಂದ ಸಿಂಗ್

    ಕೊಪ್ಪಳ: ಜಿಲ್ಲೆಯಲ್ಲಿ ಅಂಜನಾದ್ರಿ ಬೆಟ್ಟ ಸೇರಿ ಇತರ ಪ್ರವಾಸಿ ತಾಣಗಳಿದ್ದು, ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದೆಂದು ಪರಿಸರ ಮತ್ತು ಜೀವಿ ಶಾಸ್ತ್ರ, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಹೇಳಿದರು.

    ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 73ನೆ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಅಂಜನಾದ್ರಿ ಬೆಟ್ಟವು ಐತಿಹಾಸಿಕ ಸ್ಥಳ. ರಾಮ ಭಕ್ತ ಆಂಜನೇಯನ ಜನ್ಮ ಸ್ಥಳವೆಂಬುದು ಭಕ್ತರ ನಂಬಿಕೆ. ದೇವಾಲಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಪ್ರವಾಸಿಗರ ಅನುಕೂಲಕ್ಕಾಗಿ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಜಿಲ್ಲೆಯಲ್ಲಿ ಕರೊನಾ ಮೂರನೇ ಅಲೆ ಆವರಿಸಿದ್ದು, ಮಕ್ಕಳ ಚಿಕಿತ್ಸೆಗಾಗಿ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಮಾದರಿ ಪರೀಕ್ಷೆ ಹೆಚ್ಚಿಸಿದ್ದು, ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

    ಪೊಲೀಸ್, ಗೃಹರಕ್ಷಕ ದಳ, ಎನ್‌ಸಿಸಿ, ಸೇವಾದಳ, ಸ್ಕೌಟ್ಸ್ ಅಂಡ್ ಗೈಡ್ಸ್ ಹಾಗೂ ವಿವಿಧ ಶಾಲೆಗಳ ಮಕ್ಕಳಿಂದ ಪಥಸಂಚಲನ ನಡೆಯಿತು. ಎಸ್ಸೆಸ್ಸೆಲ್ಸಿ ಮಕ್ಕಳ ಫಲಿತಾಂಶ ಸುಧಾರಣೆಗೆ ಸಿದ್ಧಪಡಿಸಿರುವ ಚಿಗುರು 10ನೇ ತರಗತಿ ಅಭ್ಯಾಸ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಅತ್ಯುತ್ತಮ ಸೇವೆ ಸಲ್ಲಿಸಿದ ನೌಕರರಿಗೆ ಸರ್ವೋತ್ತಮ ಸೇವಾ ಪುರಸ್ಕಾರ ನೀಡಲಾಯಿತು. ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ರ‌್ಯಾಂಕ್ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಅಮೃತ ಯೋಜನೆಗಳ ಮಾಹಿತಿ ನೀಡುವ ಕಿರು ರೂಪಕ ಪ್ರದರ್ಶನಗೊಳಿಸಲಾಯಿತು.

    ಶಾಸಕ ರಾಘವೇಂದ್ರ ಹಿಟ್ನಾಳ್, ಸಂಸದ ಸಂಗಣ್ಣ ಕರಡಿ, ಮುನಿರಾಬಾದ್ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಬಿ.ಎಚ್.ಎಂ., ನಗರಸಭೆ ಅಧ್ಯಕ್ಷೆ ಲತಾ ಗವಿಸಿದ್ದಪ್ಪ ಚಿನ್ನೂರ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಹಾಂತೇಶ ಪಾಟೀಲ್, ಡಿಸಿ ಎಸ್.ವಿಕಾಸ್ ಕಿಶೋರ್, ಜಿಪಂ ಸಿಇಒ ಫೌಜಿಯಾ ತರನ್ನುಮ್, ಎಸ್ಪಿ ಟಿ.ಶ್ರೀಧರ, ಎಡಿಸಿ ಎಂ.ಪಿ ಮಾರುತಿ, ಎಸಿ ನಾರಾಯಣರಡ್ಡಿ ಕನಕರಡ್ಡಿ ಇತರರಿದ್ದರು.

    ಗವಿಮಠಕ್ಕೆ ಭೇಟಿ : ಉಸ್ತುವಾರಿ ವಹಿಸಿಕೊಂಡ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಸಿಂಗ್, ಮೊದಲು ಗವಿಮಠಕ್ಕೆ ಭೇಟಿ ನೀಡಿ ಕರ್ತೃ ಗದ್ದುಗೆ ದರ್ಶನ ಬಳಿಕ ಗವಿಶ್ರೀಗಳ ಆಶೀರ್ವಾದ ಪಡೆದುಕೊಂಡರು.

    ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ಹೇಳಿದ ಸಚಿವ ಆನಂದ ಸಿಂಗ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts