More

    ಸೇವಾ ಭದ್ರತೆ ನೀಡಲು ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳ ಪ್ರತಿಭಟನೆ

    ಕೊಪ್ಪಳ: ಬಹು ವರ್ಷದಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಸೇರಿದಂತೆ ಇತರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಶುಕ್ರವಾರ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

    ರಾಜ್ಯದಲ್ಲಿ 14,500, ಜಿಲ್ಲೆಯಲ್ಲಿ 450ಕ್ಕಿಂತ ಹೆಚ್ಚು ಅತಿಥಿ ಉಪನ್ಯಾಸಕರಿದ್ದೇವೆ. 5, 10 ಹಾಗೂ ಕೆಲವರು 15 ವರ್ಷದಿಂದ ಗೌರವಧನ ಆಧಾರದಲ್ಲಿ ಕೆಲಸ ಮಾಡುತ್ತಿದ್ದೇವೆ. ಬಹುಪಾಲು ಜನರಿಗೆ ವಯೋಮಿತಿ ಮೀರಿದೆ. ಆದರೆ, ಸರ್ಕಾರಿಂದ ಮಾತ್ರ ಸೂಕ್ತ ಸೇವಾಧನ, ಗೌರವಧನ ಸಿಗುತ್ತಿಲ್ಲ. ನೇಮಕಾತಿ ಮಾಡಿಕೊಳ್ಳಲು ಅವಕಾಶವಿದ್ದರೂ ಸರ್ಕಾರ ಮನಸ್ಸು ಮಾಡುತ್ತಿಲ್ಲ. ಅನೇಕ ವರ್ಷದಿಂದ ನಮ್ಮ ಬೇಡಿಕೆ ಈಡೇರಿಕೆಗೆ ಮನವಿ ಸಲ್ಲಿಸುತ್ತಿದ್ದೇವೆ. ಆದರೆ, ಯಾವೊಂದು ಬೇಡಿಕೆ ಈಡೇರುತ್ತಿಲ್ಲವೆಂದು ಅಳಲು ತೋಡಿಕೊಂಡರು.

    ಕನಿಷ್ಠ 10 ವರ್ಷ ಸೇವೆ ಸಲ್ಲಿಸಿದವರನ್ನು ಸೇವಾ ಜ್ಯೇಷ್ಠತೆ ಮೇಲೆ ನೇಮಕಾತಿ ಮಾಡಿಕೊಳ್ಳಬೇಕು. ಪಶ್ಚಿಮ ಬಂಗಾಳದಲ್ಲಿ ಕನಿಷ್ಠ ಐದು ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಿ 57 ಸಾವಿರ ರೂ. ವೇತನ ನೀಡಲಾಗುತ್ತಿದೆ. ಅದರಂತೆ ರಾಜ್ಯದಲ್ಲೂ ನಿಯಮ ರೂಪಿಸಬೇಕು. ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯಗಳು ನೀಡಿದ ತೀರ್ಪು ಆಧರಿಸಿ ರಾಜ್ಯದ ಅತಿಥಿ ಉಪನ್ಯಾಸಕರಿಗೆ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts