More

    ಸೇವೆ ಕಾಯಂಗೊಳಿಸಿ; ಅತಿಥಿ ಉಪನ್ಯಾಸಕರ ಸಂಘ ಒತ್ತಾಯ ಕೊಪ್ಪಳದಲ್ಲಿ ಪ್ರತಿಭಟನಾ ಮೆರವಣಿಗೆ

    ಕೊಪ್ಪಳ: ಸೇವಾ ಭದ್ರತೆ, ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

    ರಾಜ್ಯದ 430 ಸರ್ಕಾರಿ ಪದವಿ ಕಾಲೇಜುಗಳಲ್ಲಿ 14,554 ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದು, ಒಂದು ದಶಕದಿಂದ ಕಡಿಮೆ ಗೌರವ ಧನ ಪಡೆದು ಕೆಲಸ ಮಾಡುತ್ತಿದ್ದೇವೆ. ಬೇರೆ ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಹಲವು ಸೌಲಭ್ಯ ಕಲ್ಪಿಸಿವೆ. ಅದರಂತೆ ನಮಗೂ ಸೌಲಭ್ಯ ನೀಡುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸಿದ್ದೇವೆ. ಹಲವು ಮನವಿ ಸಲ್ಲಿಸಿದ್ದೇವೆ. ಆದರೂ, ಸರ್ಕಾರ ಸಮಸ್ಯೆಗಳ ಬಗ್ಗೆ ಗಮನಹರಿಸುತ್ತಿಲ್ಲ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೌಜನ್ಯಕ್ಕೂ ನಮ್ಮೊಡನೆ ಮಾತುಕತೆ ನಡೆಸುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.

    ಈ ಹಿಂದೆ ಮಾನವೀಯತೆ ಆಧಾರದಲ್ಲಿ ಸೇವೆ ಕಾಯಂಗೊಳಿಸಿದಂತೆ ಈಗಲೂ ಮಾಡಬೇಕು. ಗೌರವಧನ ಹೆಚ್ಚಳ ಮಾಡಬೇಕು. ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು. ನಗರದ ಅಶೋಕ ವೃತ್ತದಿಂದ ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬಾಯಿ ಬಡಿದುಕೊಳ್ಳುವುದು, ಉನ್ನತ ಶಿಕ್ಷಣ ಸಚಿವರ ಭಾವಚಿತ್ರಕ್ಕೆ ದೀರ್ಘದಂಡ ನಮಸ್ಕಾರ ಹಾಕುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಪದಾಧಿಕಾರಿಗಳಾದ ಅನುರಾಧಾ, ಡಾ.ಗಿರಿಜಾ ಟಿ.ಶಿವಣ್ಣ, ಶಿವಮೂರ್ತಿ ಗುತ್ತೂರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts