More

    ನಗರ, ಪಟ್ಟಣಗಳ ಅಭಿವೃದ್ಧಿಗೆ ಆದ್ಯತೆ : ತಂಗಡಗಿ ಭರವಸ

    ಕೊಪ್ಪಳ: ಜಿಲ್ಲೆಯ ನಗರ, ಪಟ್ಟಣಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ಹಂತ ಹಂತವಾಗಿ ಅನುದಾನ ಬಿಡುಗಡೆಗೊಳಿಸಿ ಅನುಷ್ಠಾನ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಭರವಸೆ ನೀಡಿದರು.

    ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 4ನೇ ಹಂತದಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಹಮ್ಮಿಕೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

    18 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಾಗಿದೆ. ಕೊಪ್ಪಳ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಭವಿಷ್ಯದ ಜನಸಂಖ್ಯೆ ಮೂಲ ಸೌಕರ್ಯ ಕಲ್ಪಿಸಬೇಕಿದೆ. ಈ ನಿಟ್ಟಿನಲ್ಲಿ ಯೋಜನೆ ರೂಪಿಸಿದ್ದು, ಹಲವು ಹಂತಗಳಲ್ಲಿ ಅಭಿವೃದ್ಧಿ ಮಾಡಲಾಗುವುದು. ಸಿದ್ದರಾಮಯ್ಯ ಸಿಎಂ ಆದ ನಂತರ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ದೊರೆತಿದೆ.

    ಕಿಮ್ಸ್​ ಆಸ್ಪತ್ರೆಗೆ 192 ಕೋಟಿ ರೂ. ಅನುದಾನ ನೀಡಲಾಗಿದೆ. ಭಾಗ್ಯನಗರಕ್ಕೆ ಶಾಶ್ವತ ಕುಡಿವ ನೀರು ಸೌಲಭ್ಯ ಕಲ್ಪಿಸಲು 108 ಕೋಟಿ ರೂ. ತಾವರಗೇರಾ, ಕಾರಟಗಿ, ಕುಕನೂರು, ಯಲಬುರ್ಗಾ ಪಟ್ಟಣಗಳಲ್ಲಿ ಹೈಟೆಕ್​ ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗುವುದು. ಗುತ್ತಿಗೆದಾರರು ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ನಡೆಸಿ ಎಂದು ಸೂಚಿಸಿದರು.

    ಶಾಸಕ ರಾವೇಂದ್ರ ಹಿಟ್ನಾಳ್​ ಮಾತನಾಡಿ, ಕಳೆದೊಂದು ದಶಕದಲ್ಲಿ ನಗರ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂ. ಅನುದಾನ ತಂದಿರುವೆ. ನಗರೋತ್ಥಾನ 3ನೇ ಹಂತದಲ್ಲಿ 22 ಕೋಟಿ ರೂ., ಈಗ 18 ಕೋಟಿ ರೂ. ವೆಚ್ಚದಲ್ಲಿ ಮತ್ತೆ ಅಭಿವೃದ್ಧಿ ಪ್ರಾರಂಭಿಸಿದ್ದೇವೆ. ರಸ್ತೆ ಅಗಲೀಕರಣ ಮಾಡಬೇಕಿದ್ದು, ಜನರು ಸಹಕರಿಸಬೇಕು. ಹುಲಿಕೆರೆ ತುಂಬಿಸಲು 250 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

    ಜಿಪಂ ಮಾಜಿ ಅಧ್ಯಕ್ಷ ರಾಜಶೇಖರ ಹಿಟ್ನಾಳ, ನಗರಸಭೆ ಅಧ್ಯಕ್ಷೆ ಶಿವಗಂಗಾ ಭೂಮಕ್ಕನವರ, ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ ಪಾಷಾ ಪಲ್ಟನ್​, ಡಿಯುಡಿಸಿ ಪಿಡಿ ಕಾವ್ಯರಾಣಿ ಕೆ.ವಿ, ಎಸಿ ಕ್ಯಾಪ್ಟನ್​ ಮಹೇಶ ಮಾಲಗಿತ್ತಿ, ಪೌರಾಯುಕ್ತ ಗಣಪತಿ ಪಾಟೀಲ್​, ನಗರಸಭೆ ಸದಸ್ಯರಾದ ಮುತ್ತುರಾಜ ಕುಫ್ಟಿಗಿ, ಗುರುರಾಜ ಹಲಗೇರಿ, ಸಿದ್ದು ಮ್ಯಾಗೇರಿ, ವಿರುಪಾಕ್ಷಪ್ಪ ಮೋರನಾಳ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts