More

    ಪರೀಕ್ಷೆಯಲ್ಲಿ ಎಸ್‌ಒಪಿ ಪಾಲನೆ ಕಡ್ಡಾಯ ; ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸೂಚನೆ

    ಟಿಇಟಿ ಪರೀಕ್ಷಾ ಪೂರ್ವಭಾವಿ ಸಭೆ

    ಕೊಪ್ಪಳ: ಜಿಲ್ಲೆಯಲ್ಲಿ ಆ.22ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದ್ದು, ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್‌ಒಪಿ) ಕಡ್ಡಾಯವಾಗಿ ಅನುಸರಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಸೂಚಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

    ಕೋವಿಡ್ ಕಾರಣಕ್ಕೆ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಸಿಬ್ಬಂದಿ ನಿಯೋಜಿಸಬೇಕು. ಪ್ರಶ್ನೆಪತ್ರಿಕೆ ಸಾಗಿಸುವಾಗ ಪೊಲೀಸ್ ಭದ್ರತೆ ಕಲ್ಪಿಸಬೇಕು. ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಕುಡಿಯಲು ಬಿಸಿ ನೀರಿನ ವ್ಯವಸ್ಥೆ ಮಾಡಿ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ನೋಡಿಕೊಳ್ಳಿ. ಅಂಗವಿಕಲರಿಗೆ ರ‌್ಯಾಂಪ್ ವ್ಯವಸ್ಥೆ ಮಾಡುವಂತೆ ಸೂಚಿಸಿದರು.

    ಪರೀಕ್ಷೆಯಲ್ಲಿ ಅಕ್ರಮ ನಡೆದರೆ, ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಯಾಗಿಸಲಾಗುವುದು. ಕೋವಿಡ್ ಲಸಿಕೆ ಪಡೆದವರನ್ನೇ ಪರೀಕ್ಷಾ ಕಾರ್ಯ ನಿಯೋಜಿಸಿ. ಹೆಚ್ಚುವರಿ ಸಿಬ್ಬಂದಿ ಕಾಯ್ದಿರಿಸಿಕೊಳ್ಳಿ. ಇದರಿಂದ ತುರ್ತು ಸಮಯದಲ್ಲಿ ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts