More

    ವೈರಲ್ ಫೀವರ್​ಗೆ ತತ್ತರಿಸಿದ ಕೊಪ್ಪಳದ ಗ್ರಾಮ; ಊರೋರಿಗೆಲ್ಲ ಮೈ,ಕೈ ನೋವು; ದೇವಸ್ಥಾನವೇ ಈಗ ಆಸ್ಪತ್ರೆ

    ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ವೈರಲ್ ಫೀವರ್ ವ್ಯಾಪಕವಾಗಿ ಹರಡುತ್ತಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದ ದೇವಸ್ಥಾನದಲ್ಲಿಯೇ ಚಿಕಿತ್ಸೆ ನೀಡುತ್ತಿದ್ದಾರೆ.

    ಕುಷ್ಟಗಿ ತಾಲೂಕಿನ ನೆರೆಬೆಂಚಿ ಗ್ರಾಮ ಜನರು ಜ್ವರ ಮತ್ತು ಮೈಕೈ ನೋವಿನಿಂದ ನರಳಾಡುತ್ತಿದ್ದಾರೆ. ಗ್ರಾಮಕ್ಕೆ ಕುಷ್ಟಗಿ ತಹಶೀಲ್ದಾರ್ ರವಿಕುಮಾರ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದ ದೇವಸ್ಥಾನದಲ್ಲಿಯೇ ಚಿಕಿತ್ಸೆ ನೀಡುತ್ತಿದ್ದಾರೆ.

    ಇಡೀ ಗ್ರಾಮದಲ್ಲಿ ಎಲ್ಲರಿಗೂ ಜ್ವರ ಕಾಣಿಸಿಕೊಂಡಿದ್ದು, ಮೈ ಕೈ ನೋವಿನಿಂದ ಹಾಸಿಗೆ ಹಿಡಿದಿದ್ದಾರೆ. ನೆರಬೆಂಚಿ ಗ್ರಾಮದಲ್ಲಿ ಸುಮಾರು 1200ಕ್ಕೂ ಹೆಚ್ಚು ಜನಸಂಖ್ಯೆ ಇದೆ. 15 ದಿನಗಳಿಂದ ಜನರು ಜ್ವರದಿಂದ ಬಳಲುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನೆರೆಬೆಂಚಿ ಗ್ರಾಮಕ್ಕೆ ಕುಷ್ಟಗಿ ತಹಸೀಲ್ದಾರ್ ರವಿ ಅಂಗಡಿ ಭೇಟಿ ನೀಡಿದ್ದಾರೆ. ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆಯನ್ನು ಪರಿಶೀಲಿಸಿದರು. ಗ್ರಾಮಸ್ಥರು ಗ್ರಾಮದ ನೈರ್ಮಲ್ಯ, ನೀರಿನ ಸಮಸ್ಯೆ ಕುರಿತು ಅಳಲು ತೋಡಿಕೊಂಡರು. ನಂತರ ಗ್ರಾಮದಲ್ಲಿರುವ ರೋಗಿಗಳನ್ನು ತಾಲೂಕಾಸ್ಪತ್ರೆಗೆ ಸಾಗಿಸಲು ಸೂಚನೆ ನೀಡಿದರು.

    ಇನ್ಮುಂದೆ ಎಲ್ಲಾ ಅಡುಗೆಯಲ್ಲೂ ಶುಂಠಿ ಬಳಸಿ; ಇಲ್ಲವಾದ್ರೆ ಗಂಭೀರ ಕಾಯಿಲೆಗೆ ತುತ್ತಾಗಬೇಕಾಗುತ್ತದೆ…

    ಹಗಲಿನಲ್ಲಿ ಮಲಗಬೇಕಾ.. ಬೇಡವಾ? ಈ ಸುದ್ದಿ ಓದಿ ನಿರ್ಧಾರ ಮಾಡಿ… 

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts