More

    ಮಣ್ಣಿನ ಆರೋಗ್ಯ ಕಾಪಾಡುವುದು ಮುಖ್ಯ

    ಕೊಪ್ಪಳ: ಮನುಷ್ಯರಷ್ಟೇ ಮಣ್ಣಿನ ಆರೋಗ್ಯ ಕಾಪಾಡುವುದು ಮುಖ್ಯ ಎಂದು ಕೃಷಿ ವಿಸ್ತರಣಾ ಕೇಂದ್ರದ ಮುಂದಾಳು ಡಾ.ಎಂ.ವಿ.ರವಿ ಹೇಳಿದರು.

    ನಗರದ ಕೆವಿಕೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಮಣ್ಣು ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
    ಮಣ್ಣಿನ ಮಹತ್ವ ಮನಗಂಡು 2014ರಿಂದ ವಿಶ್ವ ಮಣ್ಣಿನ ದಿನ ಆಚರಿಸಲಾಗುತ್ತಿದೆ. ನಮ್ಮ ಆರೋಗ್ಯದಷ್ಟೇ ಮಣ್ಣಿನ ಆರೋಗ್ಯವೂ ಮುಖ್ಯ. ಬೆಳೆ ಬೆಳೆಯುವುದರೊಂದಿಗೆ ಮಣ್ಣಿನ ಆರೋಗ್ಯ ಕಾಪಾಡುವ ಜವಾಬ್ದಾರಿ ರೈತರ ಮೇಲಿದೆ. ಮಣ್ಣು ಫಲವತ್ತತೆಯಿಂದ ಕೂಡಿದ್ದಾಗ ಉತ್ತಮ ಬೆಳೆ ಬೆಳೆಯಲು ಸಾಧ್ಯ ಎಂದರು.

    ಕೃಷಿ ತಂತ್ರಜ್ಞರ ಸಂಸ್ಥೆ ಅಧ್ಯಕ್ಷ ಎಂ.ಬಿ.ಪಾಟೀಲ್ ಮಾತನಾಡಿ, ರೈತರು ಮಣ್ಣಿನ ಆರೋಗ್ಯ ಕಾಪಾಡುವ ಸಂಕಲ್ಪ ಮಾಡಬೇಕು. ಮುಂದಿನ ವರ್ಷ ವೇಳೆಗೆ ಇಲ್ಲಿ ನೆರೆದ ರೈತರು ನಿಮ್ಮ ಹೊಲದಲ್ಲಿ ಕನಿಷ್ಠ ಒಂದು ಎಕರೆಯಷ್ಟು ಭೂಮಿಯನ್ನು ಫಲವತ್ತುಗೊಳಿಸುವ ಸಂಕಲ್ಪ ಮಾಡಬೇಕು ಎಂದರು.

    ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಶಿವಣ್ಣ ಮೂಲಿಮನಿ, ತಾಲೂಕು ಕೃಷಿಕ ಸಮಾಜ ಅಧ್ಯಕ್ಷ ವಿರುಪಣ್ಣ ಹಳ್ಳಿಗುಡಿ, ರಾಜ್ಯ ಪ್ರತಿನಿಧಿ ಶಂಕರಪ್ಪ ಚೌಡಿ ತಮ್ಮ ಅನುಭವ ಹಂಚಿಕೊಂಡರು. ಸಹಾಯಕ ಕೃಷಿ ನಿರ್ದೇಶಕ ಜೀವನ ಸಾಬ್ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ಮಲ್ಲಯ್ಯ ಹಿರೇಮಠ, ವಾಮನಮೂರ್ತಿ ಪುರೋಹಿತ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts