More

    ಕಕ ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲಾಗಿದೆ ಎಂದ ಸಚಿವ ಆನಂದ ಸಿಂಗ್

    ಕೊಪ್ಪಳ: ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಅಭಿವೃದ್ಧಿಗಾಗಿ ವಿಶೇಷ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಪ್ರವಾಸೋದ್ಯಮ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಹೇಳಿದರು.

    ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ 75ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ದೇಶಕ್ಕೆ 1947 ಆ.15ರಂದು ಸ್ವಾತಂತ್ರೃ ಬಂದರೂ ಹೈದರಾಬಾದ್ ಕರ್ನಾಟಕ ಪ್ರಾಂತ್ಯ ನಿಜಾಮನ ಆಡಳಿತಕ್ಕೆ ಒಳಪಟ್ಟಿತ್ತು. ಹೀಗಾಗಿ ನಾವೆಲ್ಲ ಸ್ವಾತಂತ್ರೃದಿಂದ ದೂರ ಉಳಿಯಬೇಕಾಯಿತು. ಸರ್ದಾರ್ ವಲ್ಲಭ ಬಾಯಿ ಪಟೇಲರ ದಿಟ್ಟತನದಿಂದ 1948 ಸೆ.17ರಂದು ಹೈಕ ಪ್ರದೇಶ ಸ್ವಾತಂತ್ರೃವಾಯಿತು.

    ಹೈಕ ಪ್ರದೇಶವನ್ನು ಮಾಜಿ ಸಿಎಂ ಬಿ.ಎಸ್,ಯಡಿಯೂರಪ್ಪ ಕಲ್ಯಾಣ ಕರ್ನಾಟವೆಂದು ಘೋಷಿಸಿದರು. ವಿಮೋಚನಾ ದಿನವನ್ನು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಕಕ ಜಿಲ್ಲೆಗಳ ಅಭಿವೃದ್ಧಿಗಾಗಿ ವಿಶೇಷ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕಾಗಿಯೇ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

    ಧ್ವಜಾರೋಹಣ ಬಳಿಕ ವಿವಿಧ ತುಕಡಿಗಳು ಗೌರವ ವಂದನೆ ಸಲ್ಲಿಸಿದವು. ಹೈಕ ವಿಮೋಚನೆಗಾಗಿ ಹೋರಾಡಿದವರು ಹಾಗೂ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿವಿಧ ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಸಂಸದ ಸಂಗಣ್ಣ ಕರಡಿ, ಶಾಸಕ ರಾಘವೇಂದ್ರ ಹಿಟ್ನಾಳ್, ವಿಪ ಸದಸ್ಯೆ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷೆ ಶಿವಗಂಗಾ ಭೂಮಕ್ಕನವರ್, ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು, ಜಿಪಂ ಸಿಇಒ ಫೌಜಿಯಾ ತರನ್ನುಮ್, ಎಡಿಸಿ ಸಾವಿತ್ರಿ ಬಿ.ಕಡಿ, ಎಸಿ ಬಸವಣ್ಣೆಪ್ಪ ಕಲಶೆಟ್ಟಿ, ತಹಸೀಲ್ದಾರ್ ವಿಠ್ಠಲ್ ಚೌಗಲಾ, ಎಸ್ಪಿ ಅರುಣಾಂಗ್ಷು ಗಿರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts