More

    ಶಿಥಿಲ ಕೊಠಡಿಗಳಲ್ಲಿ ತರಗತಿ ನಡೆಸದಿರಿ: ಡಿಸಿ ಸುಂದರೇಶ ಬಾಬು ಸೂಚನೆ

    ಕೊಪ್ಪಳ: ಮಳೆಯಿಂದ ಹಾನಿಯಾದ ಮನೆಗಳಿಗೆ ತ್ವರಿತವಾಗಿ ಪರಿಹಾರ ವಿತರಿಸುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಅಧಿಕಾರಿಗಳಿಗೆ ಸೂಚನೆ ನೀಡಿದರು.

    ನಗರದ ಜಿಲ್ಲಾಡಳಿತ ಭವನದ ಕೆ-ಸ್ವಾನ್ ಸಭಾಂಗಣದಲ್ಲಿ ಶುಕ್ರವಾರ ಕಂದಾಯ, ಶಿಕ್ಷಣ, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗಿನ ವಿಡಿಯೋ ಸಂವಾದದಲ್ಲಿ ಮಾತನಾಡಿದರು. ಹಾನಿ ಸಂಭವಿಸಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ಕ್ರಮ ಕೈಗೊಳ್ಳಬೇಕು. ಪರಿಹಾರ ವಿತರಿಸಿದ ಬಗ್ಗೆ ಆರ್‌ಜಿಆರ್‌ಎಚ್‌ಸಿಎಲ್ ತಂತ್ರಾಂಶದಲ್ಲಿ ಡೇಟಾ ಎಂಟ್ರಿ ಮಾಡಬೇಕು. ಬಾಕಿ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿಗೊಳಿಸಬೇಕು. ಶಿಥಿಲಗೊಂಡ ಶಾಲಾ ಕೊಠಡಿಗಳಲ್ಲಿ ತರಗತಿ ನಡೆಸಬಾರದು. ಗೋಡೆ, ಶೌಚಗೃಹ, ಅಪಾಯಕಾರಿ ಕಟ್ಟಡಗಳ ಹತ್ತಿರ ಮಕ್ಕಳು ಹೋಗದಂತೆ ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿದರು.

    ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ ಕೆಲಸ ಚುರುಕುಗೊಳಿಸಬೇಕು. ಬೂತ್ ಮಟ್ಟದ ಅಧಿಕಾರಿಗಳು ಕಾಳಜಿ ವಹಿಸಿ ಮತದಾರರಿಂದ ಆಧಾರ್ ಜೋಡಣೆ ಮಾಡಿಸಬೇಕು. ವೋಟರ್ ಹೆಲ್ಪ್‌ಲೈನ್ ಆ್ಯಪ್ ಮೂಲಕ ಮತದಾರರು ಸ್ವಯಂ ಪ್ರೇರಿತವಾಗಿ ಆಧಾರ್ ಸಂಖ್ಯೆ ಜೋಡಿಸುವಂತೆ ಅರಿವು ಮೂಡಿಸಬೇಕು. ಪ್ರತಿ ಭಾನುವಾರ ವಿಶೇಷ ಅಭಿಯಾನ ನಡೆಯಲಿದ್ದು, ಶಿಕ್ಷಣ, ಗ್ರಾಪಂ, ನಗರ-ಸ್ಥಳೀಯ ಸಂಸ್ಥೆಗಳು ಕೈಜೋಡಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಿಳಿಸಿದರು. ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ಡಿಡಿಪಿಐ ಎಂ.ರಡ್ಡೆರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts