More

    ಶಿಕ್ಷಕರಿಗಿದೆ ದೇಶದ ಭವಿಷ್ಯ ರೂಪಿಸುವ ಶಕ್ತಿ: ಸಂಸದ ಸಂಗಣ್ಣ ಕರಡಿ ಅಭಿಮತ

    ಕೊಪ್ಪಳ: ಎಲ್ಲಿ ಅವಿರತ ಪರಿಶ್ರಮವಿರುತ್ತದೆಯೋ ಅಲ್ಲಿ ಪ್ರತಿಭೆ ಅರಳುತ್ತದೆ. ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.

    ಟಣಕನಕಲ್ ಆದರ್ಶ ವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸಮಾಜ ಬದಲಿಸುವ ಶಕ್ತಿ ಶಿಕ್ಷಕರಿಗೆ ಮಾತ್ರ ಇದೆ. ದೇಶದ ಭವಿಷ್ಯವಾದ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಸೂಕ್ತ ಪ್ರೋತ್ಸಾಹ, ನೆರವು ಸಿಕ್ಕಲ್ಲಿ ಅಂದುಕೊಂಡಿದ್ದನ್ನು ಸಾಧಿಸುತ್ತಾರೆ. ಆಟ, ಪಾಠದೊಂದಿಗೆ ಪರಿಸರದ ಬಗ್ಗೆ ಕಾಳಜಿ ಹೊಂದಬೇಕು. ಹೆಚ್ಚೆಚ್ಚು ಗಿಡ-ಮರಗಳನ್ನು ಬೆಳೆಸಬೇಕೆಂದು ಸಲಹೆ ನೀಡಿದರು.

    ಡಿಡಿಪಿಐ ಎಂ.ಎ.ರಡ್ಡೇರ ಮಾತನಾಡಿ, ಮಕ್ಕಳೊಳಗಿನ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ, ಕಲೋತ್ಸವ ಮೂಲಕ ಸಂಗೀತ, ಹಾಡು, ನೃತ್ಯ, ಚಿತ್ರಕಲೆ, ಭಾಷಣ, ಅಭಿನಯ, ನಾಟಕ ಆಯೋಜಿಸಿದ್ದು, ಮಕ್ಕಳು ಪ್ರತಿಭೆ ಪ್ರದರ್ಶಿಸಬೇಕು. ಕಲೆಗಳು ಸಂಸ್ಕಾರ ಬೆಳೆಸುತ್ತವೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದು ಸಲಹೆ ನೀಡಿದರು.
    ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶರಣ ಬಸನಗೌಡ ಮಾತನಾಡಿ, ಮಕ್ಕಳ ಮನೋಭಿಲಾಷೆಗಳನ್ನು ಅರ್ಥೈಸಿಕೊಂಡು ಶಿಕ್ಷಕರು ಪ್ರೋತ್ಸಾಹ ನೀಡಿದರೆ ಸಾಧನೆಗೆ ಸಹಕಾರಿಯಾಗುತ್ತದೆ ಎಂದರು. ಓಜನಳ್ಳಿ ಗ್ರಾಪಂ ಅಧ್ಯಕ್ಷೆ ಕಮಲಮ್ಮ ಹರಿಜನ, ಉಪಾಧ್ಯಕ್ಷ ಹುಚ್ಚಪ್ಪ ಭೋವಿ, ಸದಸ್ಯ ದೇವಪ್ಪ , ಬಿಇಒ ಮೈತ್ರಾದೇವಿ, ಶಿಕ್ಷಣಾಧಿಕಾರಿ ಸಂಘದ ಅಧ್ಯಕ್ಷ ಬಾಬುಸಾಬ್ ಲೈನ್‌ದಾರ್, ಸಮನ್ವಯಾಧಿಕಾರಿ ಪ್ರಕಾಶ ತಗಡಿನಮನಿ, ಶಿಕ್ಷಣಾಧಿಕಾರಿಗಳಾದ ಸುಜಾತಾ, ನೀಲಕಂಠಪ್ಪ ಕಂಬಳಿ, ಪ್ರಾಣೇಶ ಮಾದಿನೂರು, ಕೊಟ್ರಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts